Sunday, September 27, 2026
Sunday, September 27, 2026

ಉಡುಪಿ: ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ

ಉಡುಪಿ: ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ

Date:

ಉಡುಪಿ, ಆ.2: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೊಟೇಲ್, ಬ್ಯಾಂಕ್, ಕಂಪೆನಿಗಳು ಹಾಗೂ ಅಂಗಡಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವ ಹಿನ್ನೆಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು 15 ದಿನಗಳ ಒಳಗಾಗಿ ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕವನ್ನು ಶೇ.60 ರಷ್ಟು ಪ್ರದರ್ಶಿಸಲು ಕ್ರಮ ವಹಿಸಬೇಕು. ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ ನವೀಕರಿಸದೇ ಇರುವ ಉದ್ದಿಮೆದಾರರು 7 ದಿನಗಳ ಒಳಗೆ ಉದ್ದಿಮೆ ಪರವಾನಿಗೆ ಪಡೆಯಲು ನಿಯಮಾನುಸಾರ ಅರ್ಜಿ ಸಲ್ಲಿಸಬಹುದಾಗಿದೆ. ತಪ್ಪಿದ್ದಲ್ಲಿ ಕರ್ನಾಟಕ ಪುರಸಭಾ ಅಧಿನಿಯಮ 256 ರ ಉಪ ನಿಯಮ (6) ರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!