Tuesday, July 28, 2026
Tuesday, July 28, 2026

ಕ್ರಿಯೇಟಿವ್ ಕಾಲೇಜು: ಕೆಸರ್ಡೊಂಜಿ ದಿನ

ಕ್ರಿಯೇಟಿವ್ ಕಾಲೇಜು: ಕೆಸರ್ಡೊಂಜಿ ದಿನ

Date:

ಕಾರ್ಕಳ, ಆ.6: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್ ಕೆಸರ್ಡೊಂಜಿ ದಿನ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮ ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ರಾಜ್ಯಾಧ್ಯಕ್ಷರು, ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ) ಬೆಂಗಳೂರು ಇವರು ಉದ್ಘಾಟನಾ ಭಾಷಣದಲ್ಲಿ ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ ಎಂದರು. ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ. ರವರು ಪ್ರಾಸ್ತಾವಿಕ ನುಡಿಗಳನ್ನಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸುತ್ತಾ ಸ್ವಾಗತಿಸಿದರು. ಸ್ಥಳ ದಾನಿ ಯೋಗೀಶ್ ಕಿಣಿ, ಶಿಕ್ಷಕರು, ಸ.ಕಿ.ಪ್ರಾ ಶಾಲೆ ಪಲಾಯಿ ಬಾಕ್ಯಾರು, ತೆಳ್ಳಾರು ಇವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಕ್ರೀಡೆ, ಮಣ್ಣು, ಪ್ರಕೃತಿಯ ಸಂಪರ್ಕ ಕಡಿಮೆ ಆಗುತ್ತಿದೆ. ಇಂತಹ ಕೆಸರ್ಡೊಂಜಿ ದಿನ ಕಾರ್ಯಕ್ರಮಗಳು ಮಕ್ಕಳಿಗೆ ನೈಜ ಅನುಭವಗಳನ್ನು ನೀಡುವ ಮೂಲಕ ಪ್ರಕೃತಿಯೊಂದಿಗೆ ಅವರ ಸಂಬಂಧವನ್ನು ಪುನರ್ ಸ್ಥಾಪಿಸುತ್ತದೆ ಎಂದರು. ಸಹ ಸಂಸ್ಥಾಪಕರಾದ ಆದರ್ಶ ಎಂ.ಕೆ ಹಾಗೂ ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಉದ್ಯಮಿಗಳಾದ ಸರ್ವೋತ್ತಮ ಕಡಂಬರವರು ಈ ಕಾರ್ಯಕ್ರಮದ ತಾತ್ಪರ್ಯವನ್ನು ಹಂಚಿಕೊಂಡರು.

ಹಿರ್ಗಾನ ಗ್ರಾಮದ ಪ್ರಗತಿಪರ ಕೃಷಿಕರಾದ ಸತ್ಯನಾರಾಯಣ ಪಡ್ರೆ, ಸದಾನಂದ ಶೆಟ್ಟಿಗಾರ್, ವಿಠಲ್ ನಾಯಕ್ ಇವರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭಕ್ಕೆ ಆಗಮಿಸಿದ ಎಲ್ಲರಿಗೂ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಖಾದ್ಯಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!