Saturday, September 21, 2024
Saturday, September 21, 2024

ಬೆಳೆ ವಿಮೆ- ನೋಂದಣಿಗೆ ಸೂಚನೆ

ಬೆಳೆ ವಿಮೆ- ನೋಂದಣಿಗೆ ಸೂಚನೆ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಜಿಲ್ಲೆಯ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ, ಪ್ರತಿ ಹೆ.ಗೆ ವಿಮಾ ಮೊತ್ತ 55,000 ರೂ. ಗಳಿಗೆ, 1100 ರೂ. ವಿಮಾ ಕಂತಿನ ದರವನ್ನು ನಿಗದಿಪಡಿಸಲಾಗಿದ್ದು, ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನ.

ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಬ್ಯಾಂಕ್ ಖಾತೆ ಅಥವಾ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ, ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘ, ಸಾರ್ವಜನಿಕ ಸೇವಾ ಕೇಂದ್ರ, ವಿಮಾ ಸಂಸ್ಥೆಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!