ಉಡುಪಿ, ಆ.15: ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ, ರಾಜ್ಯ ಅತ್ಯುತ್ತಮ ಯವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಕೆದಿಂಜೆ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜರಗಿತು. ಕೆದಿಂಜೆ ಶಾಲಾ ಸಂಚಾಲಕ ಯು.ಶೇಷಗಿರಿ ಕಾಮತ್ ಧ್ವಜಾರೋಹಣಗೈದರು.
ಕೆದಿಂಜೆ ಶಾಲಾ ಮುಖ್ಯ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಪೂರ್ವಾಧ್ಯಕ್ಷ ಸುರೇಶ್ ಕಾಸರಬೈಲು, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ವೀಣಾ ಆಚಾರ್ಯ, ಕೀರ್ತನ್ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಪ್ರಶಾಂತ್ ಬೋಳ, ಸದಸ್ಯರಾದ ರಾಘು ಪೂಜಾರಿ, ಶಾಲಾ ಸಹಶಿಕ್ಷಕಿ ರೇಖಾ ಪೈ, ಗೌರವ ಶಿಕ್ಷಕಿಯರಾದ ಮಮತಾ ಜೆ, ಭಾರತಿ ಆಚಾರ್ಯ, ಶ್ವೇತಾ ಆಚಾರ್ಯ, ಸುರಕ್ಷಾ ಮೊದಲಾದವರಿದ್ದರು.




By
ForthFocus™