ಉಡುಪಿ, ಆ.15: ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಹೆತ್ತವರಿಗೆ ಉತ್ತಮ ಮಗನಾಗಿ, ದೇಶಕ್ಕೆ ಉತ್ತಮ ಪ್ರಜೆಯಾದರೆ ಜನ್ಮ ಸಾರ್ಥಕವಾಗುವುದು. ಈ ದಿನ ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರನ್ನು ಸ್ಮರಿಸಿಕೊಳ್ಳುವ ವಿಶೇಷ ದಿನವಾಗಲಿ ಎಂದರು.
ಕಮಲಾಬಾಯಿ ಪ್ರೌಢಶಾಲೆ ಕಡಿಯಾಳಿ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಸುದರ್ಶನ್, ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಮುಂತಾದವರು ಉಪಸ್ಥಿತರಿದ್ದರು.




By
ForthFocus™