ಉಡುಪಿ, ಆ.20: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದಿಂದ ಮಂಜೂರಾಗಿರುವ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಮತ್ತು ವೈದ್ಯಾಧಿಕಾರಿಗಳು ಸೇರಿದಂತೆ, 32 ಸಿಬ್ಬಂದಿಗಳ ವಸತಿ ಸಂಕೀರ್ಣಕ್ಕೆ ಟೆಂಡರ್ ಕರೆಯುವ ಪ್ರಕ್ರಿಯೆ ಆರಂಭಿಸಿದ್ದು, ಯೋಜನಾ ವೆಚ್ಚ 150 ಕೋಟಿ ರೂಪಾಯಿ ಆಗಿರುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಟೆಂಡರ್ ಗೆ ಆಗಸ್ಟ್ 25ರಂದು ಕೊನೆಯ ದಿನವಾಗಿದ್ದು, ಆಗಸ್ಟ್ 26ರ ನಂತರ ಟೆಂಡರ್ ತೆರೆಯುವ ಪ್ರಕಟಣೆ ಇಲಾಖೆ ನೀಡಿದೆ.
ಬಹು ದಿನಗಳ ಬೇಡಿಕೆಯಾದ ಇಎಸ್ಐ ಆಸ್ಪತ್ರೆಗೆ ಮಂಜೂರಾತಿ ನೀಡಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ಕೊಟ್ಟಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಕೇಂದ್ರ ಕಾರ್ಮಿಕ ಸಚಿವರಾದ ಮನುಶುಕ್ಲ ಮಾಂಡವಿಯ, ಸಹಾಯಕ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಉಡುಪಿ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.




By
ForthFocus™