Saturday, February 7, 2026
Saturday, February 7, 2026

ಎನ್.ಡಿ.ಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಭೇಟಿಯಾದ ಶಾಸಕ ಯಶ್ಪಾಲ್ ಸುವರ್ಣ

ಎನ್.ಡಿ.ಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಭೇಟಿಯಾದ ಶಾಸಕ ಯಶ್ಪಾಲ್ ಸುವರ್ಣ

Date:

ನವದೆಹಲಿ, ಆ.21: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಿ. ಪಿ. ರಾಧಾಕೃಷ್ಣನ್ ವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕೊಯಮತ್ತೂರಿನಿಂದ ಎರಡು ಬಾರಿ ಸಂಸದರಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ಸಿ ಪಿ ರಾಧಾಕೃಷ್ಣನ್ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ ಡಿ ಎ ಮೈತ್ರಿಕೂಟ ಹಿಂದುಳಿದ ವರ್ಗಗಳ ನಾಯಕರನ್ನು ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೇಶದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಗೌರವ ಸಲ್ಲಿಸಿದೆ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ರಾಜ್ಯ ಸಭಾ ಸದಸ್ಯರಾದ ಡಾ. ಕೆ. ಲಕ್ಷ್ಮಣ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಉತ್ತರ ಪ್ರದೇಶದ ಸಚಿವರಾದ ನರೇಂದ್ರ ಕುಮಾರ್ ಕಶ್ಯಪ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!