Monday, September 7, 2026
Monday, September 7, 2026

ನಿವೃತ್ತಿಯೇ ಇಲ್ಲದ ಶ್ರೇಷ್ಠ ವೃತ್ತಿ ಶಿಕ್ಷಕ ವೃತ್ತಿ: ಯಶ್ಪಾಲ್ ಸುವರ್ಣ

ನಿವೃತ್ತಿಯೇ ಇಲ್ಲದ ಶ್ರೇಷ್ಠ ವೃತ್ತಿ ಶಿಕ್ಷಕ ವೃತ್ತಿ: ಯಶ್ಪಾಲ್ ಸುವರ್ಣ

Date:

ಉಡುಪಿ, ಸೆ.6: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕ್ತಿ ಎಂಬ ದಾಸ ವಾಣಿಯಂತೆ ಜಗತ್ತಿನ ಪ್ರತಿಯೊಬ್ಬ ಸಾಧಕನ ಸಾಧನೆಯಲ್ಲಿ ಗುರುಗಳ ಪಾತ್ರ ಮಹತ್ವದಾಗಿದ್ದು, ಪ್ರಪಂಚದ ಅತೀ ಶ್ರೇಷ್ಠ ಗೌರವಯುತ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಪಾಲಿಗೆ ಎಂದಿಗೂ ನಿವೃತ್ತರಾಗದೆ ಗುರುಗಳಾಗಿಯೇ ಸ್ಥಾನ ಪಡೆಯುವ ಮೂಲಕ ಸಮಾಜಕ್ಕೆ ಸದಾ ಮಾದರಿಯಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ಸುವರ್ಣ ಹೇಳಿದರು.

ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಉಡುಪಿ ಚಿತ್ತಾರ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಉಡುಪಿ ನಗರ ಭಾಗದ ವಿವಿಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ 75 ಮಂದಿ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ್ ಕುಲಾಲ್, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಪ್ರಭು, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಸಂಧ್ಯಾ ರಮೇಶ್, ವೀಣಾ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!