Sunday, July 26, 2026
Sunday, July 26, 2026

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್: ಶಿಕ್ಷಕರ ದಿನಾಚರಣೆ

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್: ಶಿಕ್ಷಕರ ದಿನಾಚರಣೆ

Date:

ಉಡುಪಿ, ಸೆ.6: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಿದರು. ಮಣೂರು ಪಡುಕೆರೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಜಯ ಶೆಟ್ಟಿ, ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಧ್ಯಾಪಕರಾದ ಮೋಹಿದ್ದಿನ್, ಕೊಕ್ಕರ್ಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ, ಹಾಗೂ ಕಟಪಾಡಿ ಎಸ್ ವಿ ಎಸ್ ಶಾಲಾ- ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಪೈ, ಬೈಲೂರು ಸಮೀಪದ ನಚಿಕೇತ ವಿದ್ಯಾಲಯ ಅಮೃತ ಭಾರತಿ ಸಂಸ್ಥೆಯ ಅಧ್ಯಾಪಕಿ ಕೃಷ್ಟಿಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ ಸಾಧನೆ ಮಾಡಿರುವ ವಿದುಷಿ ದೀಕ್ಷಾ ಅವರನ್ನು ಸನ್ಮಾನಿಸಿ ಗೌರವಿಸಿದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಶಿಕ್ಷಕರ ಪಾತ್ರ ಬಹಳ ಮಹತ್ತರವಾದದು. ಜಗತ್ತಿನಲ್ಲಿ ಬಹುತೇಕ ಕಡೆಗಳಲ್ಲಿ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಸಾಧನೆಯನ್ನು ಮಾಡಿದ್ದಾರೆ. ಶಿಕ್ಷಣವೂ ನಮಗೆ ಅಮೂಲ್ಯವಾದ ಸಾಧನೆಗೆ ದಾರಿ ಮಾಡಿಕೊಟ್ಟಿವೆ. ಶಿಕ್ಷಕರ ಶಿಕ್ಷಣದಿಂದ ಗುರಿ ತಲುಪಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಈ ಸಂದರ್ಭ ಮಾತನಾಡಿ ಒಂದು ಮಗು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕಾದರೆ ಶಿಕ್ಷಕರ ಶಿಕ್ಷಣದಿಂದ ಸಾಧ್ಯ. ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಾಠಗಳು ವಿದ್ಯಾರ್ಥಿ ತಿಳಿದುಕೊಂಡಲ್ಲಿ ಆತ ತನ್ನ ಗುರಿ ತಲುಪಲು ಸಾಧ್ಯವಿದೆ ಎಂದು ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಯೋಗಿಶ್ ಕೊಟ್ಯಾನ್, ಡಾ. ಚರಿಷ್ಮಾ ಶೆಟ್ಟಿ, ಮಲಬಾರ್ ಗೊಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥರು ಹಫೀಜ್ ರೆಹಮಾನ್, ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮಾರುಕಟ್ಟೆ ವ್ಯವಸ್ಥಾಪಕರಾದ ತಂಝಿಮ್ ಶಿರ್ವ, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರನ್ನು ನಿತ್ಯಾನಂದ, ಯಾಸೀರ್, ದಿವ್ಯ, ಫಾರೂಕ್, ನಿಕಿತಾ ಪರಿಚಯಿಸಿದರು. ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸಿಬ್ಬಂದಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!