Sunday, July 26, 2026
Sunday, July 26, 2026

ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆ

ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆ

Date:

ಗಂಗೊಳ್ಳಿ, ಸೆ.7: ನಾರಾಯಣ ಗುರುಗಳ ಆದರ್ಶಗಳನ್ನು ಮತ್ತು ಉನ್ನತ ಮೌಲ್ಯಗಳನ್ನು ಅರಿತುಕೊಂಡು ಅದನ್ನು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡಿದಾಗಲೇ ಜನ್ಮದಿನಾಚರಣೆ ನಿಜವಾದ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ಎಂದು ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾರಾಯಣ ಗುರುಗಳ ವಿಶ್ವಮಾನವ ತತ್ವವನ್ನು ಈ ಜಗತ್ತಿನ ಪ್ರತಿಯೊಬ್ಬರು ಮನಗಾಣಬೇಕು. ಆ ಮೂಲಕ ಸೌಹಾರ್ದಯುತವಾದ ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಸ್ವಾಗತಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಸದಸ್ಯರಾದ ಶಂಕರ ಪೂಜಾರಿ, ಗೋಪಾಲ ಚಂದನ್, ರಾಮಚಂದ್ರ ಪೂಜಾರಿ, ಚಂದ್ರಕಾಂತ ಪೂಜಾರಿ ಹಾಗೂ ವಸಂತ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಿ ಎ ಆರ್ ಲಕ್ಷ್ಮಣ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!