Sunday, September 27, 2026
Sunday, September 27, 2026

ಹಾಲು ಉತ್ಪಾದಕರ ಸಹಕಾರಿ ಸಂಘ ಕೋಡಿ: ವಾರ್ಷಿಕ ಮಹಾಸಭೆ

ಹಾಲು ಉತ್ಪಾದಕರ ಸಹಕಾರಿ ಸಂಘ ಕೋಡಿ: ವಾರ್ಷಿಕ ಮಹಾಸಭೆ

Date:

ಕೋಟ, ಸೆ.9: ಹಾಲು ಉತ್ಪಾದಕರ ಸಹಕಾರಿ ಸಂಘ ಕೋಡಿ ಕನ್ಯಾಣ ವಾರ್ಷಿಕ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಮೆಂಡನ್ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ವಿಸ್ತರಣಾಧಿಕಾರಿಗಳಾದ ಸರಸ್ವತಿ ಒಕ್ಕೂಟದಿಂದ ಹೈನುಗಾರಿಕೆಗೆ ಸಿಗುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷರು ಸಂಘವು ವರದಿ ವರ್ಷದಲ್ಲಿ ಸದಸ್ಯರಿಗೆ ೨೦% ಡಿವಿಡೆಂಟ್ ನೀಡುವುದೆಂದು ಘೋಷಿಸಿದರು ಹಾಲಿನ ಪ್ರಮಾಣ ಹೆಚ್ಚು ಮಾಡುವ ಬಗ್ಗೆ ಹೈನುಗಾರಿಕೆ ಮಾಡಲು ಪ್ರೋತ್ಸಾಹ ಪೂರಕವಾಗುವ ಎಲ್ಲಾ ಕಾರ್ಯಕ್ರಮ ಕೈಗೊಳ್ಳಲು ಸಂಘದ ಆಡಳಿತ ಮಂಡಳಿ ಸಿದ್ಧವಿದೆ ಎನ್ನುವ ಭರವಸೆಯನ್ನು ನೀಡಿದರು.

ಸಂಘದ ಉಪಾಧ್ಯಕ್ಷೆ ಸುಮತಿ, ನಿರ್ದೇಶಕರಾದ ಸದಾಶಿವ ಐತಾಳ್, ರಘುರಾಮ್ ಮೆಂಡನ್, ವಿಶ್ವನಾಥ ಪೂಜಾರಿ, ಲಕ್ಷ್ಮೀ ಮರಕಾಲ್ತಿ, ಕಾವೇರಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಉಮೇಶ ಐತಾಳ್ ಸ್ವಾಗತಿಸಿ ವರದಿಯನ್ನು ಮಂಡಿಸಿದರು. ಸಂಘದ ನಿರ್ದೇಶಕರಾದ ನಾಗೇಂದ್ರ ನಾವಡ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!