Saturday, February 7, 2026
Saturday, February 7, 2026

ಸಾಮಾಜಿಕ ಸಂಘಟನೆಯಿಂದ ಶ್ರೇಯಸ್ಸು: ಗಣೇಶ್ ಶೆಟ್ಟಿ

ಸಾಮಾಜಿಕ ಸಂಘಟನೆಯಿಂದ ಶ್ರೇಯಸ್ಸು: ಗಣೇಶ್ ಶೆಟ್ಟಿ

Date:

ಕಾರ್ಕಳ, ಸೆ.9: ಸಾಧಕರಿಗೆ ಗೌರವ, ಪ್ರೋತ್ಸಾಹ, ಬಡ ಜನರಿಗೆ ಸಹಾಯದ ಮೂಲಕ ಪರಸ್ಪರ ಸಹಕಾರದ ಜೊತೆಗೆ ಸಮಾಜವು ಒಂದಾದಲ್ಲಿ ಎಲ್ಲರಿಗೂ ಶ್ರೇಯಸ್ಸು ಸಾಧ್ಯ ಎಂದು ತುಳುಕೂಟ ಗೋವ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಸಾಣೂರು ಹೇಳಿದರು. ಸಾಣೂರು ಬಂಟರ ಯಾನೆ ನಾದವರ ಸಂಘದ ವತಿಯಿಂದ ಸಾಣೂರಿನ ಶಿವರಾಮ ರೈ ಕಲಾ ವೇದಿಕೆಯಲ್ಲಿ ನಡೆದ ದಶಮಾನೋತ್ಸವ ಸಂಭ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಪ್ರಯುಕ್ತ ಜರುಗಿದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಂಟ ಸಮುದಾಯದವರು ಎಲ್ಲ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ, ಮಾಡುತ್ತಿದ್ದಾರೆ. ಸಾಣೂರು ಬಂಟರ ಸಂಘ ಕಳೆದ ಹಲವು ವರ್ಷಗಳಿಂದ ತಮ್ಮ ಸಂಘಟನೆಯನ್ನು ಬಲಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು, ಸಾಧಕರಿಗೆ ಅಭಿನಂದಿಸುವ ಮೂಲಕ ಹಲವಾರು ಸಾಮಾಜಿಕ ಕಾರ್ಯಕ್ರಮ ಆಯೋಜಿಸುವುದು ಶ್ಲಾಘನೀಯ ಎಂದರು.

ರಾಜ್ಯ ಕೃಷರ್ ಮಾಲಕರ ಸಂಘದ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿ, ಬಂಟ ಸಮುದಾಯದ ಜನತೆಗೆ ಎಲ್ಲ ಸಂಘಟನೆಗಳನ್ನು ಒಗ್ಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸುವ ಕೆಲಸವು ಎಲ್ಲೆಡೆ ನಡೆಯುತ್ತಿರುವುದು ಶ್ಲಾಘನೀಯ. ಬಂಟರು ಇತರ ಸಮುದಾಯದ ಶ್ರೇಯಸ್ಸು ಮತ್ತು ಅಭಿವೃದ್ಧಿಗೂ ಒತ್ತು ನೀಡುತ್ತಾರೆ. ಸಾಣೂರು ಬಂಟರ ಸಂಘದ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಣೂರು ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಕಳ ಬಂಟರ ಸಂಘದ ಮಾಜಿ ಸಂಚಾಲಕ ಸುನಿಲ್‌ಕುಮಾರ್ ಶೆಟ್ಟಿ, ಕಾರ್ಕಳ ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಪೂರ್ಣಿಮಾ ಎನ್. ಹೆಗ್ಡೆ ಕುಂಟಾಡಿ, ಕಾರ್ಕಳ ಯುವ ಬಂಟರ ಸಂಘದ ಅಧ್ಯಕ್ಷ ಅವಿನಾಶ್ ಶೆಟ್ಟಿ, ಬಂಟರ ಸಂಘ ಕಾರ್ಕಳ-ಹೆಬ್ರಿ ಸಂಚಾಲಕ ವಿಜಯ ಶೆಟ್ಟಿ, ಪ್ರಮುಖರಾದ ಸಾಣೂರು ಗುತ್ತು ಪ್ರಭಾತ್ ನಾಯ್ಕ್ ಸಾಣೂರು ಗುತ್ತು ಮಾಲಿನಿ ರೈ, ಶ್ರೀಮತಿ ಎಸ್. ರೈ, ಹರ್ಷ ಪ್ರಮೋದ್ ಶೆಟ್ಟಿ, ಶುಭಕರ ಶೆಟ್ಟಿ, ಪ್ರಜ್ವಲ್ ಶೆಟ್ಟಿ ಉಪಸ್ಥಿತರಿದ್ದರು.

ಬ್ಯಾಡ್ಮಿಂಟನ್ ಚಾಂಪಿಯನ್ ಆಯುಷ್ ಆರ್. ಶೆಟ್ಟಿ ಅವರ ಅವರ ತಾಯಿ ಶಾಲ್ಮಿಲಿ ಶೆಟ್ಟಿ ಅವರನ್ನು ಗೌರವಿಸಲಾಯಿತು. ಪಿಯುಸಿ, ಎಸ್‌ಎಸ್‌ಎಲ್‌ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಸಮ್ಮಾನಿಸಲಾಯಿತು.

ಪ್ರ. ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಓಂಕಾರ್ ವಂದಿಸಿದರು. ಜೊತೆ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ವರದಿ ಮಂಡಿಸಿದರು. ಪ್ರಸಾದ್ ಶೆಟ್ಟಿ ಸಮ್ಮಾನಿತರ ಪಟ್ಟಿ ವಾಚಿಸಿದರು. ಜೊತೆ ಕಾರ್ಯದರ್ಶಿ ಮೋಹನ್ ಶೆಟ್ಟಿ ಸಾಣೂರು ಸ್ವಾಗತಿಸಿ, ನಿರೂಪಿಸಿದರು. ಸಭಾ ಕಾರ್ಯಕ್ರಮ ನಂತರ ಬೈಲೂರು ಚೈತನ್ಯ ಕಲಾವಿದರು ವತಿಯಿಂದ ‘ಅಷ್ಟಮಿ’ ನಾಟಕ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!