Sunday, July 26, 2026
Sunday, July 26, 2026

ಆರ್.ಕೆ.ಪಾಟ್ಕರ್ ಶಾರದಾ ಶಾಲೆ: ವಿದ್ಯಾಸಂಕಲ್ಪ ಸಮಾವೇಶ

ಆರ್.ಕೆ.ಪಾಟ್ಕರ್ ಶಾರದಾ ಶಾಲೆ: ವಿದ್ಯಾಸಂಕಲ್ಪ ಸಮಾವೇಶ

Date:

ಉಡುಪಿ, ಸೆ.9: ಶತಮಾನೋತ್ಸವದ ಹೊಸ್ತಿಲಲ್ಲಿರುವ ಆರ್.ಕೆ.ಪಾಟ್ಕರ್ ಅನುದಾನಿತ ಶಾರದಾ ವಿದ್ಯಾಸಂಸ್ಥೆಯಲ್ಲಿ ವಿದ್ಯಾ ಸಂಕಲ್ಪ ಸಮಾವೇಶ ಮತ್ತು ಮಹಾಸಭೆಯನ್ನು ನಡೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ದಾನವಾಗಿ ನೀಡಿದ ಜಾಗದಲ್ಲಿ ಶಾಲೆಯನ್ನು ನಿರ್ಮಿಸಿದ್ದು ಈ ಶಾಲೆಯು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ನೂರು ವರ್ಷಗಳ ಸನಿಹದಲ್ಲಿರುವ ಈ ಶಾಲೆಯ ಕೆಲ ಕಟ್ಟಡಗಳು ಶಿಥಿಲವಾಗಿದೆ. ಹೀಗಾಗಿ ಕೆಲವು ಕಟ್ಟಡಗಳನ್ನು ತೆರವುಗೊಳಿಸಿ ಶತಮಾನೋತ್ಸವ ಸಂದರ್ಭದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಪೂರಕವಾಗಿ ಹೊಸ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

ಫಾರ್ಮ ಕಂಪನಿಯ ಮಾಜಿ ಸಿಇಓ ಪಿ. ಆತ್ಮರಾಮ ಪಾಟೀಲ್‌ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮನವಿ ಪತ್ರವನ್ನು ಬಿಡುಗಡೆ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್ ಮಾತನಾಡಿ, ಈ ಶಾಲೆ ನಮ್ಮ ದೇಶದ ಆಸ್ತಿಯಾಗಬೇಕು. ಇದರ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿಬೇಕು. ವಿದ್ಯಾರ್ಥಿಗಳನ್ನು ರಾಷ್ಟ್ರೀಯತೆಯನ್ನು ಪಸರಿಸುವ ಶಿಕ್ಷಣದ ಜೊತೆಗೆ ಬೆಳೆಸುವ ಅಗತ್ಯತೆ ಇದೆ. ಹೀಗಾಗಿ ಈ ಶಾಲೆಯ ಚಿಂತನೆ ರಾಷ್ಟ್ರೀಯವಾದ ಆಗಿದ್ದು ಇಂತಹಾ ಶಾಲೆಗಳು ಸಮಾಜದಲ್ಲಿ ಅಭಿವೃದ್ಧಿ ಹೊಂದುವ ಅವಶ್ಯಕತೆ ಇದೆ ಎಂದು ಹೇಳಿದರು.

ಸಭಾಧ್ಯಕ್ಷತೆಯನ್ನು ಕೆ.ಕೆ.ಡಿ.ಜಿ.ಬಿ. ವಿದ್ಯಾ ಪ್ರಸಾರಕ ಮಂಡಲದ ಅಧ್ಯಕ್ಷ ಸತೀಶ್ ಪಾಟೀಲ್‌ರವರು ವಹಿಸಿದ್ದರು. ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಧಾಕರ್ ಶೆಣೈ, ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸ್ಥಾಪಕ ಅಧ್ಯಕ್ಷ ಭರತ್ ಪ್ರಭು, ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷ ದಿನೇಶ್ ಪ್ರಭು, ಉಡುಪಿ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷ ವಿಷ್ಣುದಾಸ್ ಪಾಟೀಲ್, ಮಹಿಳಾ ಸಮಿತಿಯ ಅಧ್ಯಕ್ಷೆ ಶಕುಂತಳ ಶಾನುಭಾಗ್, ಮಂಡಲದ ಉಪಾಧ್ಯಕ್ಷರಾದ ರಾಧಾಕೃಷ್ಣ ಸಾಮಂತ್, ಮಂಜುನಾಥ್ ಪಾಟೀಲ್, ಸದಸ್ಯರಾದ ಸಂಜಯ್ ಪ್ರಭು ದೇವರಾಜ ಪ್ರಭು, ಎಂ ಪುರುಷೋತ್ತಮ ಪ್ರಭು ಉಪಸ್ಥಿತರಿದ್ದರು.

ಕೆಕೆಡಿಜಿಬಿ ವಿದ್ಯಾ ಪ್ರಸಾರಕ ಮಂಡಲದ ಕೋಶಾಧಿಕಾರಿ ಗೋಪಾಲಕೃಷ್ಣ ಪ್ರಭು ಸ್ವಾಗತಿಸಿ, ಕಾರ್ಯದರ್ಶಿ ಅಶೋಕ್ ಸಾಮಂತ್ ವಂದಿಸಿ, ವೆಂಕಟೇಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!