ಉಡುಪಿ, ಸೆ.10: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.




By
ForthFocus™