ಕಾಪು, ಸೆ.12: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಹಾಗೂ ಎಲ್ಲಾ ಉಪಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಕ್ಷೇತ್ರದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಇವರ ಸಹಕಾರದೊಂದಿಗೆ ಅಮ್ಮನಿಗೆ ಹೂವಿನ ಪೂಜೆಯನ್ನು ನೆರವೇರಿಸಲಾಯಿತು.
ನಂತರ ನಡೆದ ಸಭೆಯಲ್ಲಿ ವಿವಿಧ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದು, ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿ ಅಭಿನಂದಿಸಿ ಗೌರವಿಸಲಾಯಿತು.
ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಗೌರವಾಧ್ಯಕ್ಷರಾದ ಸುಧಾಕರ ಹೆಗ್ಡೆ ತುಂಗಾ, ಡಾ. ಕೆ ಪ್ರಕಾಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅನಿಲ್ ಬಲ್ಲಾಳ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಉಪಾಧ್ಯಕ್ಷರುಗಳಾದ ಮನೋಹರ ಎಸ್ ಶೆಟ್ಟಿ, ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ ಶೆಟ್ಟಿ, ಪ್ರಮುಖರಾದ ರಘುಪತಿ ಭಟ್, ಧರ್ಮಪಾಲ್ ದೇವಾಡಿಗ, ಆರ್ ಜಿ. ಶೆಟ್ಟಿ ಮುಂಬೈ, ಕಿಶೋರ್ ಕುಮಾರ್ ಶೆಟ್ಟಿ ಕುತ್ಯಾರ್, ಸುಗ್ಗಿ ಸುಧಾಕರ ಶೆಟ್ಟಿ, ಸುಧೀರ್ ಶೆಟ್ಟಿ ಸಾಗರ, ಪುಣೆ ಸಮಿತಿಯ ದಿನೇಶ್ ಶೆಟ್ಟಿ ಕಳತ್ತೂರು, ಉದಯ ಶೆಟ್ಟಿ ಕಳತ್ತೂರು, ಶ್ರೀಕರ ಶೆಟ್ಟಿ ಕಲ್ಯಾ, ಭಾಸ್ಕರ್ ಸಾಲ್ಯಾನ್, ಕೃಷ್ಣಪ್ರಸಾದ್ ಅಡ್ಯಂತಾಯ, ಕೊಡವೂರು ದಿವಾಕರ ಶೆಟ್ಟಿ, ಕೆ. ವಿಶ್ವನಾಥ್, ಭಗವಾನ್ ದಾಸ್ ಶೆಟ್ಟಿಗಾರ್, ಸುಧಾಕರ ಶೆಟ್ಟಿ ಮಕರ, ಗಿರೀಶ್ ಪೂಜಾರಿ, ನಿರ್ಮಲ್ ಕುಮಾರ್ ಹೆಗ್ಡೆ, ಪ್ರಭಾಕರ ಪೂಜಾರಿ, ಬೀನಾ ವಿ ಶೆಟ್ಟಿ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಕರ ಸಾಲ್ಯಾನ್, ಮನೋಹರ ರಾವ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ ಹಾಗೂ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




By
ForthFocus™