Saturday, February 7, 2026
Saturday, February 7, 2026

ಅ.11- ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಪ್ರಬಂಧ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮ: ಯಶ್ಪಾಲ್ ಸುವರ್ಣ

ಅ.11- ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಪ್ರಬಂಧ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮ: ಯಶ್ಪಾಲ್ ಸುವರ್ಣ

Date:

ಉಡುಪಿ, ಸೆ.16: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಸಂವಾದ ಕಾರ್ಯಕ್ರಮ ಅಕ್ಟೋಬರ್ 11 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ದೇಶ ಕಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಭವಿಷ್ಯದ ಆತ್ಮನಿರ್ಭರ ಭಾರತ ನಿರ್ಮಾಣದ ರೂವಾರಿಗಳಾದ ವಿದ್ಯಾರ್ಥಿಗಳ ದೃಷ್ಟಿಯಲ್ಲಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ, ಕಾರ್ಯ ಯೋಜನೆ, ಬದ್ಧತೆ ಹಾಗೂ ವಿಕಸಿತ ಭಾರತ ಕಲ್ಪನೆಯ ಬಗ್ಗೆ “ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ” “Modi in My Eyes: a Visionary” ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜನೆ ಮಾಡಲಾಗಿದೆ.

ಪ್ರಬಂಧ ಸ್ಪರ್ಧೆ 1-5 ತರಗತಿ ವಿಭಾಗ, ಪ್ರಾಥಮಿಕ ವಿಭಾಗ (6-7 ತರಗತಿ), ಪ್ರೌಢಶಾಲಾ ವಿಭಾಗ ( 8-10), ಪಿಯುಸಿ ವಿಭಾಗ, ಪದವಿ ವಿಭಾಗ, ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನದೊಂದಿಗೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ವಿಜೇತರಿಗೆ ಬ್ಯಾಂಕಿನ ವತಿಯಿಂದ ಕಲ್ಪಿಸಲಾಗುವುದು.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972120332 ಸಂಪರ್ಕಿಸಬಹುದು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವೆಬ್ ಸೈಟ್ http://www.mahalakshmicoopbank.com ನಲ್ಲಿ ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!