Sunday, January 19, 2025
Sunday, January 19, 2025

ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, ಸಾಧನೆಗೆ ಅಗತ್ಯವಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತ ಮತ್ತು ಡಿಜಿಟಲ್ ಗ್ರಂಥಾಲಯ ಸೌಲಭ್ಯವಿದ್ದು, ಅದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಅಶೋಕ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಲ್ಪೆ ಸರಕಾರಿ ಪದವಿಪೂರ್ವ ಕಾಲೇಜಿನ ಪುನೀತ್ ನಾಯಕ್, ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಗಾಯತ್ರಿ, ಕಾಳಾವರ ಸರಕಾರಿ ಪ್ರೌಢಶಾಲೆಯ ನಿಶಾ ಹಾಗೂ ಬೈಂದೂರು ಕಿರಿಮಂಜೇಶ್ವರ ಸಂದೀಪನ ಆಂಗ್ಲಮಾಧ್ಯಮ ಶಾಲೆಯ ಅಕ್ಷತಾ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!