Wednesday, September 30, 2026
Wednesday, September 30, 2026

ಕಾಪು: ಪ್ರಧಾನಿ ಮೋದಿ ಜನ್ಮದಿನ ‘ಉಚಿತ ರಿಕ್ಷಾ ಪ್ರಯಾಣ’

ಕಾಪು: ಪ್ರಧಾನಿ ಮೋದಿ ಜನ್ಮದಿನ ‘ಉಚಿತ ರಿಕ್ಷಾ ಪ್ರಯಾಣ’

Date:

ಕಾಪು, ಸೆ.18: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಚಿತ ರಿಕ್ಷಾ ಪ್ರಮಾಣಕ್ಕೆ ಕಾಪು ಪೇಟೆ ಬಳಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷರಾದ ಚಂದ್ರ ಮಲ್ಲಾರ್ ಇವರು ಸುಮಾರು 10 ವರ್ಷಗಳಿಂದ ಹಾಗೂ ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ನಜೀರ್ ಇವರು ಕಳೆದ 3 ವರ್ಷಗಳಿಂದ ಉಚಿತ ರಿಕ್ಷಾ ಪ್ರಯಾಣ ಸೇವೆ ನೀಡುತ್ತಾ ಬಂದಿರುತ್ತಾರೆ. ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಪುರಸಭೆಯ ಸದಸ್ಯರು, ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!