Monday, September 7, 2026
Monday, September 7, 2026

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Date:

ಕೋಟ, ಸೆ.19: ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಶಾಸಕರ ಅನುದಾನದಿಂದ ಕೋಟತಟ್ಟು ಪಡುಕರೆ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ ಹಸ್ತಾಂತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಜಾನಕಿ ಅವರು ಪಂಚಾಯತ್ ವಾರ್ಡ್ ಸದಸ್ಯರಾದ ರವೀಂದ್ರ ತಿಂಗಳಾಯ ಅವರು ಬಹುಕಾಲದ ಬೇಡಿಕೆಯ ಕುಡಿಯುವ ನೀರಿನ ಘಟಕ ಮಂಜೂರು ಮಾಡಿಸಲು ಶ್ರಮಿಸಿದ್ದು ಅವರಿಗೆ ಹಾಗೂ ಅನುದಾನ ನೀಡಿದ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ್ ಸರ್ಜಿ ಅವರಿಗೆ ಶಾಲೆಯ ಮತ್ತು ವಿದ್ಯಾರ್ಥಿಗಳ ಪರವಾಗಿ ಧನ್ಯವಾದ ತಿಳಿಸಿದರು.

ಕೋಟತಟ್ಟು ಪಂಚಾಯತ್ ಸದಸ್ಯರಾದ ಅಶ್ವಿನಿ ದಿನೇಶ್, ರವೀಂದ್ರ ತಿಂಗಳಾಯ, ಸೀತಾ, ಮಾಜಿ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಮಾಜಿ ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಮಾಜಿ ಪಂಚಾಯತ್ ಸದಸ್ಯ ರಾಮ ಎಂ. ಬಂಗೇರ, ಶಿಕ್ಷಕಿ ಸಂಗೀತ ಎಸ್.ಕೆ., ಗಣೇಶ್ ಆಚಾರಿ, ಲಕ್ಷ್ಮಣ ಸುವರ್ಣ, ಶೈಲಜಾ ಎಲ್.ಆರ್., ವೀಣಾ ಪ್ರಕಾಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!