Wednesday, September 9, 2026
Wednesday, September 9, 2026

ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

Date:

ಉಡುಪಿ, ಸೆ.19: ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿ ನಿಮಿತ್ತ ಪ್ರತಿ ವರ್ಷ ಅಕ್ಟೋಬರ್ 2 ನೇ ತಾರೀಕನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ ಶ್ರಮದಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025 ಅಭಿಯಾನವನ್ನು ‘ಸ್ವಚ್ಛೋತ್ಸವ’ ಎಂಬ ಘೋಷವ್ಯಾಕ್ಯದೊಂದಿಗೆ ಆಚರಿಸುತ್ತಿದೆ.

೨೦೧೪ ರಲ್ಲಿ ಆರಂಭವಾದ ಸ್ವಚ್ಛ ಭಾರತ್ ಅಭಿಯಾನವು 11ನೇ ವಾರ್ಷಿಕೋತ್ಸವನ್ನು ಆಚರಿಸುತ್ತಿದ್ದು, ಈ ಯೋಜನೆಯ ಮೈಲಿಗಲ್ಲನ್ನು ಗೌರವಿಸಲು ಹಾಗೂ ಸಾರ್ವಜನಿಕರ ಸಹಭಾಗಿತ್ವ, ಸಮುದಾಯದ ಭಾಗವಹಿಸುವಿಕೆ ಮತ್ತು ಶುಚಿತ್ವದ ಮಹತ್ವದ ಕುರಿತು ವ್ಯಾಪಕವಾದ ಅರಿವು ಮೂಡಿಸಲು ಉಡುಪಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಅರಿವು, ಸ್ವಚ್ಛತಾ ಶ್ರಮದಾನ, ಬೀಚ್‌ಗಳ ಸ್ವಚ್ಛತೆ, ಜಲ ಮೂಲಗಳ ಸ್ವಚ್ಛತೆ, ಸ್ವಚ್ಛತಾ ಸಿಬ್ಬಂದಿಗಳಿಗೆ ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು ಸೆ.17 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧನೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಪಾಕ್ಷಿಕಕ್ಕೆ ಚಾಲನೆ ನೀಡಿದರು. ಶಾಸಕ ಯಶ್‌ಪಾಲ್ ಸುವರ್ಣ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ನೋಡಲ್ ಅಧಿಕಾರಿ ಡಾ. ಉದಯ ಶೆಟ್ಟಿ, ಜಿ.ಪಂ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೋಳಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!