Saturday, January 17, 2026
Saturday, January 17, 2026

ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ

ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ

Date:

ಉಡುಪಿ, ಸೆ.19: ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಇಲಾಖೆ ಕುಂದಾಪುರ ಹಾಗೂ ರೈತ ಸಂಪರ್ಕ ಕೇಂದ್ರ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬಿಜೂರು ಹೋಸ್ಕೋಟೆಉ ಉತ್ಕೃಷ್ಟ ಸಭಾಭವನದಲ್ಲಿ ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮವು ನಡೆಯಿತು. ಉಪ ಯೋಜನಾ ನಿರ್ದೇಶಕ (ಆತ್ಮ) ಡಾ. ರಾಜೇಶ್ ಡಿ.ಪಿ. ಮಾತನಾಡಿ, ಹರಳು ರೂಪದ ಯೂರಿಯಾಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ರೈತರಿಗೆ ಖರ್ಚು ಕಡಿಮೆಯಾಗಲಿದೆ. ರೈತರು ಕಡಿಮೆ ದರದಲ್ಲಿ ದೊರೆಯುವ ಪರಿಸರ ಸ್ನೇಹಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ಮಣ್ಣಿನ ಆರೋಗ್ಯ ಫಲವತ್ತತೆಯನ್ನು ಕಾಪಾಡಬಹುದು ಎಂದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ತಜ್ಞ ಡಾ. ನವೀನ್ ನ್ಯಾನೋ ಯೂರಿಯಾ ಉಪಯೋಗಗಳ ಬಗ್ಗೆ, ಸಸ್ಯಗಳಲ್ಲಿ ಅದು ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಯೂರಿಯಾ ಬಳಸುವ ಬಗ್ಗೆ ಮಾಹಿತಿ ನೀಡಿದರು. ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆನ್ನಮ್ಮ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಂಜಿತ್ ಪೂಜಾರಿ, ಬೈಂದೂರು ಕೃಷಿಕ ಸಮಾಜ ಅಧ್ಯಕ್ಷ ವೆಂಕಟೇಶ ಹೆಚ್, ಜಯರಾಮ್ ಶೆಟ್ಟಿ, ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ನಾಗರಾಜ್ ನಾಯಕ್, ಶ್ರೀಧರ್ ಬಿಲ್ಲವ, ಗಾಯತ್ರಿ ದೇವಿ, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ದೀಕ್ಷಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!