ಕಾಪು, ಸೆ.21: ಬೆಳ್ಳೆ ಗ್ರಾಮ ಪಂಚಾಯತ್ ಸಮುದಾಯದ ಸಹಭಾಗಿತ್ವದಲ್ಲಿ ಸ್ವಚ್ಚತೇ ಸೇವೆ – 2025 ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅಂಗನವಾಡಿ ಮತ್ತು ಆರೋಗ್ಯ ಕ್ಷೇಮ ಕೇಂದ್ರಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಬೆಳ್ಳೆ: ಸವಲತ್ತುಗಳ ವಿತರಣೆ
ಬೆಳ್ಳೆ: ಸವಲತ್ತುಗಳ ವಿತರಣೆ
Date:




By
ForthFocus™