Tuesday, July 28, 2026
Tuesday, July 28, 2026

ಮಲ್ಪೆ: ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನಾಚರಣೆ

ಮಲ್ಪೆ: ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನಾಚರಣೆ

Date:

ಉಡುಪಿ, ಸೆ.21: ವಿಶ್ವಾದ್ಯಂತ ಪ್ರತೀ ವರ್ಷ ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಮಾಹೆ ವಿಶ್ವವಿದ್ಯಾಲಯ, ಕೆನರಾ ಬ್ಯಾಂಕ್, ಕರಾವಳಿ ಕಾವಲು ಪಡೆ, ಮಾಲಿನ್ಯ ಮಂಡಳಿ ಹಾಗೂ ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಡುಪಿ ಕರಾವಳಿಯ ಪ್ರಮುಖ ಸಮುದ್ರ ತೀರ ಪ್ರದೇಶಗಳಾದ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ, ಕೋಡಿ, ತ್ರಾಸಿ-ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೀಚ್ ಸ್ವಚ್ಚತಾ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಲ್ಪೆ ಕಡಲತೀರದಲ್ಲಿ ಜಿಲ್ಲೆಯ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು, ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ವಿದ್ಯಾರ್ಥಿಗಳು, ವಿವಿಧ ಸಂಘಟನೆಯ ಸದಸ್ಯ್ರರೊಂದಿಗೆ ಸ್ವತಃ ತಾವೇ ಕಸವನ್ನು ಸಂಗ್ರಹಿಸುವುದರ ಮೂಲಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪರಿಸರ ಜಾಗೃತೆಯುಳ್ಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಿ, ಪ್ಲಾಸ್ಟಿಕ್ ಬಳಸದಂತೇ ಪ್ರಮಾಣವಚನ ಭೋಧಿಸಿ ಮಾತನಾಡಿ ನಾವೆಲ್ಲರೂ ನಮ್ಮ ಸುತ್ತ ಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಬೇಕು. ನಮ್ಮ ಸುತ್ತಮುತ್ತದ ನೈರ್ಮಲ್ಯ ಸ್ವಚ್ಚವಾಗಿದ್ದಲ್ಲಿ ಮಾತ್ರ ನಾವುಗಳು ಉತ್ತಮ ಆರೋಗ್ಯ ಹೊಂದಲು ಸಾಧ್ಯ, ಇದಕ್ಕೆ ಒತ್ತು ನೀಡಬೇಕು ಎಂದರು.

ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಗಂಗಾಧರ್ ಹಾಗೂ ಮಾಹೆಯ ವಿದ್ಯಾರ್ಥಿಗಳು, ನಗರಸಭಾ ಸ್ವಚ್ಚತಾ ಕರ್ಮಿಗಳು, ವಿದ್ಯಾರ್ಥಿಗಳು, ಕೆನರಾ ಬ್ಯಾಂಕ್ ಸಿಬ್ಬಂದಿಗಳು, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!