ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ತಂತ್ರಾಂಶದಲ್ಲಿ ಲಭ್ಯವಿರುವ ಅಂಕಪಟ್ಟಿಯನ್ನು ಆಯಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗೆ ಮೇ 25 ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕರ ಮಕ್ಕಳ ಮಾಹಿತಿ ಸಲ್ಲಿಸಲು ಸೂಚನೆ

ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕರ ಮಕ್ಕಳ ಮಾಹಿತಿ ಸಲ್ಲಿಸಲು ಸೂಚನೆ
Date: