ಉಡುಪಿ, ಸೆ.21: ರಾಷ್ಟ್ರೀಯ ಹೆದ್ದಾರಿ 169 ಎ ಬಹುನಿರೀಕ್ಷಿತ ಉಡುಪಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ರೈಲ್ವೆ ಕಾಮಗಾರಿಗಳಿಗೆ ವಿಶೇಷ ಒತ್ತನ್ನು ನೀಡಲಾಗುತ್ತಿದೆ. ಅಮೃತ್ ಭಾರತ್ ಯೋಜನೆಯಡಿಯಲ್ಲಿ ದೇಶಾದ್ಯಂತ ಆಯ್ದ ರೈಲು ನಿಲ್ದಾಣಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತೀರಾ ಅಗತ್ಯವಾಗಿತ್ತು ಎಂದು ಹೇಳಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡುತ್ತಾ, ಇಂದ್ರಾಳಿ ರೈಲ್ವೆ ಬ್ರಿಡ್ಜ್‌ಗೆ ಯಾವಾಗ ಮುಕ್ತಿ ಎಂದು ನೀವೆಲ್ಲಾ ಕೇಳಿದ್ರಿ. ಈಗ ಈ ಮೇಲ್ಸೇತುವೆ ಉದ್ಘಾಟನೆಗೊಂಡಿದೆ. ನೀವೆಲ್ಲರೂ ನನ್ನ ಮೇಲೆ ಹಾಕುತ್ತಿದ್ದ ಒತ್ತಡವನ್ನು ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಾಕಿ ಕೆಲಸಕ್ಕೆ ವೇಗ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.




By
ForthFocus™