Sunday, October 4, 2026
Sunday, October 4, 2026

ಅರಿವಿನ ಬೆಳಕು ಉಪನ್ಯಾಸ ಮಾಲೆ ಉದ್ಘಾಟನೆ

ಅರಿವಿನ ಬೆಳಕು ಉಪನ್ಯಾಸ ಮಾಲೆ ಉದ್ಘಾಟನೆ

Date:

ಉಡುಪಿ, ಸೆ.29: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು, ಉಡುಪಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಗಣನಾಥ ಶೆಟ್ಟಿ ಎಕ್ಕಾರು, ಡಾ. ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು. ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಯನ್ನು ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.

ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ “ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕಾರಂತರ ನೇರ ನಡೆ- ನುಡಿ ಹಾಗೂ ಅವರು ಬದುಕಿದ ರೀತಿ ಪ್ರತಿಯೊಬ್ಬರಿಗೂ ಆದರ್ಶ, ಅವರು ಎಲ್ಲಾ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿದವರು, ಇಂದಿನ ಯುವ ಪೀಳಿಗೆ ಅವರ ಮಾರ್ಗವನ್ನು ಪಾಲುಸುವಂತಗಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಉದ್ಘಾಟಿಸಿದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ವಿರಾಜ್ ಎಚ್. ಪಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಭವ್ಯ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!