Saturday, October 3, 2026
Saturday, October 3, 2026

ಕರಾವಳಿ ಭಾಗದಲ್ಲಿ ಭಾರೀ ಗಾಳಿ ಸಾಧ್ಯತೆ

ಕರಾವಳಿ ಭಾಗದಲ್ಲಿ ಭಾರೀ ಗಾಳಿ ಸಾಧ್ಯತೆ

Date:

ಉಡುಪಿ, ಸೆ.29: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2 ರವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

ತುರ್ತು ಸೇವೆಗೆ ಶುಲ್ಕ ರಹಿತ 1077, ದೂ.ಸಂಖ್ಯೆ: 0820-2574802, ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ :0820-2520417, ಕುಂದಾಪುರ : 08254-230357, ಕಾಪು : 0820-2551444, ಬ್ರಹ್ಮಾವರ : 0820-2560494 ಹಾಗೂ ಬೈಂದೂರು : 08254-251657 ಮತ್ತು ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2593366 ಅಥವಾ 0820-2520306 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!