ಉಡುಪಿ, ಅ.2: ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಅಕ್ಟೋಬರ್ 7 ರಂದು ಜಗನ್ನಾಥ ಸಭಾಭವನದಲ್ಲಿ ಸಂಜೆ 4.30 ಗಂಟೆಗೆ ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ನಾಡು – ನುಡಿ ಸಂಸ್ಕೃತಿ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ – 2025 ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಮಾರಂಭದ ಉದ್ಘಾಟನೆಯನ್ನು ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಲಿದ್ದು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಲಿದ್ದು, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ಅವರು ಮಹರ್ಷಿ ವಾಲ್ಮೀಕಿ ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಖ್ಯಾತ ಛಾಯಾಗ್ರಾಹಕರಾದ ಆಸ್ಟ್ರೋ ಮೋಹನ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ ಭಾಗವಹಿಸಲಿದ್ದಾರೆ.
ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್
ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್
Date:




By
ForthFocus™