Friday, July 24, 2026
Friday, July 24, 2026

ಕಲಾವಿದರಿಗೆ ಎಐ ಸವಾಲು: ಎಡಿಸಿ ಅಬೀದ್ ಗದ್ಯಾಳ

ಕಲಾವಿದರಿಗೆ ಎಐ ಸವಾಲು: ಎಡಿಸಿ ಅಬೀದ್ ಗದ್ಯಾಳ

Date:

ಉಡುಪಿ, ಅ.5: ಕಲಾವಿದರಿಗೆ ಸಮಾಜದ ಜನರ ಜತೆಗೆ ಆಧುನಿಕ ಕೃತಕ ಬುದ್ಧಿಮತ್ತೆ(ಎಐ) ಸವಾಲಿದ್ದು ಹೆತ್ತವರು ಮಕ್ಕಳಿಗೆ ಸಂತಸದ ಕಲಿಕೆಯ ವಾತಾವರಣ ರೂಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗದಲ್ಲಿರುವ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಅರೇಬಿಕ್ ಕ್ಯಾಲಿಗ್ರಫಿ ಕಲಾ ಪ್ರದರ್ಶನ ಮತ್ತು ಗಾಂಧಿ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಸಂತಸದಿಂದ ಮಾಡಿದ ಕೆಲಸ ಯಾವತ್ತೂ ಭಾರವಾಗದು. ನೀರು, ಗೊಬ್ಬರ, ಬೆಳಕು, ಗಾಳಿಯಿಂದ ಬೀಜ ಮೊಳಕೆಯೊಡೆದು, ಹೆಮ್ಮರವಾಗಿ ಫಲ ನೀಡುವಂತೆ ಮಕ್ಕಳಲ್ಲಿರುವ ಕಲೆಯ ಪ್ರತಿಭೆ, ಸಾಮರ್ಥ್ಯ ಅಭಿವ್ಯಕ್ತಿಗೆ ಅವಕಾಶ, ಪೋಷಣೆ ಅಗತ್ಯ ಎಂದು ಹೇಳಿದರು.

ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಕಚೇರಿಯ ಮಹಾ ಪ್ರಬಂಧಕ ಎಚ್.ಕೆ.ಗಂಗಾಧರ, ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೇಕ್ ವಾಹಿದ್ ದಾವೂದ್, ಉದ್ಯಮಿ ಯ.ವಿಶ್ವನಾಥ್ ಶೆಣೈ ಮಾತನಾಡಿದರು. ಡಾ ಕಿರಣ ಆಚಾರ್ಯ, ಕೃಷ್ಣಮೂರ್ತಿ ರಾವ್, ಬೆಂಗಳೂರಿನ ಮೊಹಮ್ಮದ್ ಸಹಿನ್, ಇಂದ್ರಾಳಿ ಮಸೀದಿಯ ಖಾಸ್ಮಿ ಮೌಲಾನಾ ಮಸಿಯುಲ್ಲಾ ಖಾನ್, ಇನಾಯತ್ ಆರ್ಟ್ ಗ್ಯಾಲರಿಯ ಲಿಯಾಕತ್ ಅಲಿ ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲ್ ಸ್ವಾಗತಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!