ಕಾಪು, ಅ.5: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಕುಲಪತಿ ಡಾ. ರಾಮ್ ದಾಸ್ ಪೈ ಅವರ ಪತ್ನಿ ವಸಂತಿ ಪೈಯವರು ಶರನ್ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ದೇವಳದ ಪ್ರಧಾನ ತಂತ್ರಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಹಾಗೂ ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಉಪಸ್ಥಿತರಿದ್ದರು.




By
ForthFocus™