Friday, February 27, 2026
Friday, February 27, 2026

ಬಡಾನಿಡಿಯೂರು: ಉಚಿತ ವೈದ್ಯಕೀಯ ಶಿಬಿರ

ಬಡಾನಿಡಿಯೂರು: ಉಚಿತ ವೈದ್ಯಕೀಯ ಶಿಬಿರ

Date:

ಉಡುಪಿ, ಅ.5: ಜೆಸಿಐ ಉಡುಪಿ ಇಂದ್ರಾಳಿ, ಜೆಸಿಐ ಅಲೂಮ್ನೈ ಕ್ಲಬ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಂತ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಾನಿಡಿಯೂರು ಇಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರೀನ್ ರೆಮಿಡಿಸ್ ಸಂಸ್ಥೆಯ ಮುಖ್ಯಸ್ಥ ಪಿ.ಎಂ.ವಿ ಹೆಬ್ಬಾರ್, ಕಾಯಿಲೆ ಬರುವ ಮುಂಚೆ ಸರಿಯಾದ ರೀತಿಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದಲ್ಲಿ ಉತ್ತಮ ರೀತಿಯ ಜೀವನ ಸಾಗಿಸಲು ಸಾಧ್ಯ ಹೀಗಾಗಿ ಈ ರೀತಿಯ ಶಿಬಿರಗಳು ಬಹಳಷ್ಟು ಜನರಿಗೆ ಪ್ರಯೋಜನವಾಗುತ್ತವೆ ಎಂದರು.

ಉದ್ಯಮಿ, ರಾಜಕೀಯ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ. ನಾವು ನಮ್ಮ ವಾಹನಗಳನ್ನು ಸರಿಯಾದ ರೀತಿಯಲ್ಲಿ ಕಾಪಾಡುತ್ತೇವೆ ಆದರೆ ನಮ್ಮ ಆರೋಗ್ಯದ ಕುರಿತು ನಿರ್ಲಕ್ಷ್ಯ ವಹಿಸುತ್ತೇವೆ ಇದು ಸಲ್ಲದು, ಆರೋಗ್ಯವೇ ಭಾಗ್ಯ ಎಂದರು.

ವೇದಿಕೆಯಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧಾ ಆಚಾರ್ಯ, ಸದಸ್ಯ ಪ್ರವೀಣ್ ಕಾಂಚನ್, ಒಕ್ಕೂಟದ ಅಧ್ಯಕ್ಷೆ ಸುಮಿತ್ರ ಸದಾನಂದ ಕೋಟ್ಯಾನ್, ಶಾಲಾ ಮುಖ್ಯ ಶಿಕ್ಷಕಿ ಸುನಿತಾ ಎನ್.ಎಸ್, ಪಂಡರಿನಾಥ ಭಜನಾ ಮಂಡಳಿ ಅಧ್ಯಕ್ಷ ರಾಮಪ್ಪ ಸಾಲಿಯನ್, ಡಾ. ಶ್ರಮ್ಯ ಶೆಟ್ಟಿ, ಡಾ. ದಿವ್ಯಾನಿ, ಮನು ಮುಂತಾದವರು ಉಪಸ್ಥಿತರಿದ್ದರು.

ಜೆಸಿಐ ಉಡುಪಿ ಇಂದ್ರಾಳಿ ಅಧ್ಯಕ್ಷ ರಿತೇಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ನಿರ್ದೇಶಕ ಖ್ಯಾತ ವೈದ್ಯರಾದ ಡಾ. ವಿಜಯ್ ನೆಗಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಚಿತ್ರಾ ನೆಗಳೂರು ಸ್ವಾಗತಿಸಿದರು. ಪೂರ್ವಾಧ್ಯಕ್ಷ ಕೀರ್ತೇಶ್ ವಂದಿಸಿದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು.
ಸುಮಾರು 100 ಕ್ಕೂ ಹೆಚ್ಚಿನ ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!