ಕೋಟ, ಅ.6: ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾಮ ಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಸಂಯೋಜನೆಯೊಂದಿಗೆ 274ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಕೋಟ ರಾಷ್ಟ್ರೀಯ ಹೆದ್ದಾರಿಯ ಹರ್ತಟ್ಟು ಸುತ್ತಮುತ್ತ ನಡೆಯಿತು.
ಕೋಟ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ, ಎಸ್‌ಎಲ್‌ಆರ್‌ಎಂ ಘಟಕದ ಮುಖ್ಯಸ್ಥೆ ಭವ್ಯ ಸಹಕಾರ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಇದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.




By
ForthFocus™