Sunday, September 27, 2026
Sunday, September 27, 2026

ಮಣೂರು ಪಡುಕರೆ: ಬೀಚ್ ಸ್ವಚ್ಛತಾ ಅಭಿಯಾನ

ಮಣೂರು ಪಡುಕರೆ: ಬೀಚ್ ಸ್ವಚ್ಛತಾ ಅಭಿಯಾನ

Date:

ಪಡುಕರೆ, ಅ.6: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ವತಿಯಿಂದ 73ನೇ ಆನಂದ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ, ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಜಂಟಿ ಆಯೋಜನೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತುಲಾಯಿತು.

ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಮಾತನಾಡಿ, ನಮ್ಮ ಸಂಸ್ಥೆಯ ಆನಂದ ಸೃಷ್ಟಿ ಕಾರ್ಯಕ್ರಮ ಮತ್ತು ಕಾಲೇಜಿನ ಜಂಟಿ ಆಯೋಜನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಜೊತೆ ಜೊತೆಗೆ ಕಸಗಳನ್ನು ಬಿಸಾಡದಂತೆ ಅರಿವು ಮೂಡಿಸುವ ಕೆಲಸಗಳು ನಡೆಯಬೇಕು ಮತ್ತು ಶಿಬಿರಾರ್ಥಿಗಳ ಮನೆ ಭೇಟಿಯ ಸಮಯದಲ್ಲಿ ಇದರ ಅರಿವು ಮೂಡಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ ಮಾತನಾಡಿ, ಇಂದಿನ ದಿನ ಮಾನದಲ್ಲಿ ಯುವ ಜನಾಂಗ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯ ಎಂದರು.

ಜನತಾ ಸಂಸ್ಥೆಯ ಎಜಿಎಮ್ ಶ್ರೀನಿವಾಸ್ ವ್ಯವಸ್ಥಾಪಕರಾದ ಮಿಥುನ್ ಕುಮಾರ್, ಗೀತಾನಂದ ಫೌಂಡೇಶನ್ ಸಂಯೋಜಕರಾದ ರವಿಕಿರಣ್, ಕೋಟ ಪಂಚಾಯತ್ ಉಪಾಧ್ಯಕ್ಷರಾದ ಪಾಂಡು ಪೂಜಾರಿ ಮತ್ತು ಎನ್ ಎಸ್ ಎಸ್ ಯೋಜನಾಧಿಕಾರಿ ಸಂತೋಷ್ ನಾಯಕ್, ಆನಂದ ಸೃಷ್ಟಿ ತಂಡದ ಸದಸ್ಯರು, ಶಿಬಿರಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!