Tuesday, July 28, 2026
Tuesday, July 28, 2026

ಸಮಾಜಕ್ಕಾಗಿ ಜೀವನ ಮುಡಿಪಾಗಿಟ್ಟ ಸಂತೋಷ್ ಕುಮಾರ್: ಕೆ.ಜಯಪ್ರಕಾಶ್ ಹೆಗ್ಡೆ

ಸಮಾಜಕ್ಕಾಗಿ ಜೀವನ ಮುಡಿಪಾಗಿಟ್ಟ ಸಂತೋಷ್ ಕುಮಾರ್: ಕೆ.ಜಯಪ್ರಕಾಶ್ ಹೆಗ್ಡೆ

Date:

ಕೋಟ, ಅ.7: ತನ್ನ ವಯಕ್ತಿಕ ಜೀವನಕ್ಕಾಗಿ ಏನನ್ನೂ ಬಯಸದೆ ಸಮಾಜಕ್ಕಾಗಿಯೇ ಜೀವನವನ್ನು ಸಮರ್ಪಿಸಿಕೊಂಡ ಜೀವನದ ಯಶೋಗಾಥೆ ಅತ್ಯಮೂಲ್ಯವಾದದ್ದು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಸೋಮವಾರ ಕೋಟದ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಾಂಸ್ಕೃತಿಕ ಚಿಂತಕ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಸಹಾಯಾರ್ಥವಾಗಿ ಅವರ ಕುಟುಂಬಕ್ಕೆ ನೆರವಾಗುವ ಯಕ್ಷಗಾನ ಕಾರ್ಯಕ್ರಮದಲ್ಲಿ ನಿಧಿ ಹಸ್ತಾಂತರಿಸಿ ಅವರು ಮಾತನಾಡಿದರು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಮಾತನಾಡಿ, ಸಂತೋಷ್ ಕುಮಾರ್ ವ್ಯಕ್ತಿತ್ವ ಹಾಗೂ ಅವರಿಗೆ ಸಮಾಜದ ಬಗ್ಗೆ ಇದ್ದ ಕಾಳಜಿ, ಶಿಕ್ಷಣದ ಬಗ್ಗೆ ಇದ್ದ ಅವರ ಪ್ರೇಮವನ್ನು ಸಭೆಯಲ್ಲಿ ನುಡಿತೋರಣದ ಮೂಲಕ ಬಿಚ್ಚಿಟ್ಟರು. ಇದೇ ವೇಳೆ ಸಂತೋಷ್ ಕುಮಾರ್ ಕುಟುಂಬಕ್ಕೆ ನೀಡಬೇಕಾದ ನೆರವಿನ ಸುಮಾರು ೫.೫೦ಲಕ್ಷ ರೂಗಳ ನಿಧಿಯನ್ನು ಅವರ ಸಂಬಂಧಿಕರಾದ ಮಹೇಶ್ ರವರಿಗೆ ಹಸ್ತಾಂತರಿಸಿದರು.

ಉದ್ಯಮಿ ಬಿಜು ನಾಯರ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ನಿರ್ದೇಶಕರಾದ ಜಿ.ತಿಮ್ಮ ಪೂಜಾರಿ, ಸಿಇಒ ಶರತ್ ಕುಮಾರ್ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಯಕ್ಷ ಚಿಂತಕ ಪ್ರೊ.ಎಸ್ ವಿ ಉದಯ್ ಕುಮಾರ್ ಶೆಟ್ಟಿ, ಬೇಳೂರು ರಾಘವ ಶೆಟ್ಟಿ, ದಸಂಸ ಮುಖಂಡ ಶ್ಯಾಮಸುಂದರ್ ತೆಕ್ಕಟ್ಟೆ, ರಾಜು ಬೆಟ್ಟಿನ ಮನೆ, ಕಾರ್ಯಕ್ರಮ ಸಂಘಟಕರಾದ ಜಯರಾಮ ಶೆಟ್ಟಿ, ಪ್ರಭಾಕರ್ ಪಡುಕರೆ, ನಾಗರಾಜ್ ಪಡುಕರೆ, ಮಂಜುನಾಥ್ ಭಂಡಾರಿ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ ಮತ್ತಿತರರು ಇದ್ದರು. ಸಂಘಟಕ ನ್ಯಾಯವಾದಿ ಟಿ.ಮಂಜುನಾಥ್ ಗಿಳಿಯಾರು ಕಾರ್ಯಕ್ರಮ ನಿರ್ವಹಿಸಿದರು. ನಂತರ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಸುಧನ್ವಮೋಕ್ಷ ಯಕ್ಷಗಾನ ಪ್ರದರ್ಶಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!