Friday, November 20, 2026
Friday, November 20, 2026

ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ

ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ

Date:

ಉಡುಪಿ, ಅ.8: ವಾಲ್ಮೀಕಿ ನಾಡು ಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​ ಮಹರ್ಷಿ ವಾಲ್ಮೀಕಿ ಸಂಘ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​ 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.​

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ ಅಧ್ಯಕ್ಷತೆ ವಹಿಸಿದ್ದರು. ​ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅಭಿನಂದನಾ ಮಾತುಗಳನ್ನಾಡಿದರು. ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ​ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​.ಪಿ., ಗ್ರಾಮೀಣ ಬ್ಯಾಂಕ್​ ಹಿರಿಯ ವ್ಯವಸ್ಥಾಪಕ ಕೆ. ರಾ​ಘವೇಂದ್ರ ಉಪಾಧ್ಯಾಯ, ಜಿಲ್ಲಾ ಕನಕದಾಸ ಸೇವಾ ಸಂ​ಘದ ನಿಕಟಪೂರ್ವ ಅಧ್ಯಕ್ಷ ಹನುಮಂತ ಆಡಿನ​, ಮಹರ್ಷಿ ವಾಲ್ಮೀಕಿ​ ಸಂಘದ ಗೋಪಾಲ್​ ದೇವದುರ್ಗ​,​ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ಪದ್ಮಾಸಿನಿ, ವಸಂತ್, ದೀಪಾ ಕರ್ಕಿ ಉಪಸ್ಥಿತರಿದ್ದರು.

ಸಾಹಿತಿ ಡಾ. ನಿಕೇತನ ಉಪನ್ಯಾಸ ನೀಡಿದರು. ವಾಲ್ಮೀಕಿ ಸಂಘ ಗೌರವಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿದರು. ರಾ​ಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ರಾಜೇಶ್​ ಭಟ್​ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!