Saturday, November 21, 2026
Saturday, November 21, 2026

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

Date:

ಉಡುಪಿ, ಅ.8: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆ ಅಕ್ಟೋಬರ್ 7 ರಂದು ಉಡುಪಿಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರ ಮೇಲೆ ಶೂ ಎಸೆದ ಘಟನೆ ತೀವ್ರ ಖಂಡನೀಯ. ಮುಂದೆ ಇಂತಹ ಸಂವಿಧಾನ ವಿರೋಧಿ ಕೃತ್ಯ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮತಗಳ್ಳತನ ಬಗ್ಗೆ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಿ ಸಹಿ ಸಂಗ್ರಹ ಅಭಿಯಾನ ನಡೆಸುವಂತೆ ಸೂಚಿಸಿದರು. ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮುಂಬರುವ ಸ್ಥಳೀಯಾಡಳಿತದ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸರ್ವ ಸಿದ್ದತೆಯನ್ನು ಮಾಡಿಕೊಳ್ಳುವ ಬಗ್ಗೆ ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಮಂಚಿ ಸ್ವಾಗತಿಸಿ, ಭರತ್ ಮಣಿಪಾಲ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!