Tuesday, April 21, 2026
Tuesday, April 21, 2026

ಕಾಪು: ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ

ಕಾಪು: ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ

Date:

ಕಾಪು, ಅ.13: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ‘ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ’ ಕಾರ್ಯಾಗಾರ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡುತ್ತಾ,

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿ ನೋಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲಗೊಳ್ಳುತ್ತಿದ್ದು ಭಾರತವು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಜರ್ಮನ್ ದೇಶವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ತಲುಪುವ ವಿಶ್ವಾಸವಿದೆ ಎಂದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಸದಾನಂದ ಪ್ರಭು, ಗಿರೀಶ್ ಅಂಚನ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!