Wednesday, September 30, 2026
Wednesday, September 30, 2026

ಸೇನೆಯಲ್ಲಿ ಹತ್ತಾರು ರೀತಿಯ ಉದ್ಯೋಗಾವಕಾಶಗಳಿವೆ: ಬೈಂದೂರು ಚಂದ್ರಶೇಖರ ನಾವಡ

ಸೇನೆಯಲ್ಲಿ ಹತ್ತಾರು ರೀತಿಯ ಉದ್ಯೋಗಾವಕಾಶಗಳಿವೆ: ಬೈಂದೂರು ಚಂದ್ರಶೇಖರ ನಾವಡ

Date:

ಗಂಗೊಳ್ಳಿ, ಅ.18: ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗಾವಕಾಶಗಳು ಸೇನೆಯಲ್ಲಿವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಾಜಿ ಸೈನಿಕರು ಲೇಖಕರೂ ಆಗಿರುವ ಬೈಂದೂರು ಚಂದ್ರಶೇಖರ ನಾವಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ, ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗು ಶ್ರೀ ನಾರಾಯಣಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ರೋಟರಿ ಸಭಾಂಗಣದಲ್ಲಿ ನಡೆದ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೈನ್ಯ ಸೇರುವುದೆಂದರೆ ಕೇವಲ ಯುದ್ಧ ಮಾಡುವುದು ಎಂದು ಅರ್ಥವಲ್ಲ. ದೇಶಪ್ರೇಮದ ಮನೋಭಾವನೆಯೊಂದಿಗೆ ಅಲ್ಲಿರುವ ವಿವಿಧ ಉದ್ಯೋಗಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಕೂಡ ಸಾಧ್ಯವಿದೆ ಎಂದು ಅವರು ಹೇಳಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ನಾರಾಯಣಗುರು ಜನ ಸೇವಾ ಬಳಗದ ಉಪಾಧ್ಯಕ್ಷೆ ಮಮತಾ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಅಭಿಜ್ಞಾ ಖಾರ್ವಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷಯ ಖಾರ್ವಿ ಉಪಸ್ಥಿತರಿದ್ದರು. ಬೈಂದೂರು ಚಂದ್ರಶೇಖರ ನಾವಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾಲೇಜಿನ ಕಾಮರ್ಸ್ ವಿದ್ಯಾರ್ಥಿನಿ ಯಕ್ಷಗಾನ ಕಲಾವಿದೆ ಅದಿತಿ ಖಾರ್ವಿ ಅವರನ್ನು ಅಭಿನಂದಿಸಲಾಯಿತು.

ದೀಪಾಲಿ ಮತ್ತು ಅದಿತಿ ಪ್ರಾರ್ಥಿಸಿದರು. ಮಾದರಿ ಸ್ವಾಗತಿಸಿದರು. ಸಾನಿಕ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಎಸ್‌.ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾರ್ಥನ ಪೈ ನಿರೂಪಿಸಿದರು. ನಿಸರ್ಗ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!