Saturday, February 28, 2026
Saturday, February 28, 2026

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಸಿ.ಟಿ ರವಿ ಭೇಟಿ

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಸಿ.ಟಿ ರವಿ ಭೇಟಿ

Date:

ಕಾಪು, ಅ.19: ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಕಾಪು ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರ ಸಮಕ್ಷಮದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಐತಿಹ್ಯ ಇರುವಂತೆ ಹಿಂದೆ ವಿಜಯನಗರ ಸಾಮ್ರಾಜ್ಯದಲ್ಲಿ ಕೆಳದಿಯ ಅರಸರ ದಂಡನ್ನ ಆಶೀರ್ವದಿಸಿ ದಂಡಿನ ಮಾರಿಯಾಗಿ, ಸೈನ್ಯಕ್ಕೆ ರಕ್ಷಣೆಯನ್ನ ಮತ್ತು ಜಯವನ್ನು ಒದಗಿಸಿಕೊಟ್ಟ ತಾಯಿ ಕಾಪುವಿನಲ್ಲಿ ನೆಲೆಸಿ ಭಕ್ತರನ್ನ ಹರಸುತ್ತಾ ಬಂದಿದ್ದಾರೆ. ಸಮಿತಿಯವರು ದೇವಳವನ್ನು ಜೀರ್ಣೋದ್ಧಾರ ಮಾಡಿ ಆ ತಾಯಿಯ ಸೇವೆಯನ್ನು ಮಾಡ್ತಾ ಇದ್ದಾರೆ ಎಂದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಜಿತೇಂದ್ರ ಶೆಟ್ಟಿ ಉದ್ಯಾವರ, ಅನಿಲ್ ಕುಮಾರ್ ಕಾಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...
error: Content is protected !!