Sunday, September 6, 2026
Sunday, September 6, 2026

ಸಾಲಿಗ್ರಾಮ: ಗೆಳೆಯರ ಬಳಗ ಕಾರಂತ ಪುರಸ್ಕಾರ

ಸಾಲಿಗ್ರಾಮ: ಗೆಳೆಯರ ಬಳಗ ಕಾರಂತ ಪುರಸ್ಕಾರ

Date:

ಸಾಲಿಗ್ರಾಮ, ಅ.20: ಕಾರಂತರ ನಡೆ ನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣಾದಾಯಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಶನಿವಾರ ಗಿರಿಜಾ ಕಲ್ಯಾಣ ಮಂಟಪದಲ್ಲಿ ಗೆಳೆಯರ ಬಳಗ ಕಾರ್ಕಡ ಇವರ ಆಶ್ರಯದಲ್ಲಿ ಡಾ.ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿ ಎಚ್ ಶಕುಂತಲ ಭಟ್ ಹಳೆಯಂಗಡಿ ಇವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಯಿತು.

ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಕಾರಂತ ಸಂಸ್ಮರಣೆಗೈದರು. ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನನೂರು ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,
ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ್ ನಾವಡ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ, ಕೋಟ ಸಿಎ ಬ್ಯಾಂಕ್ ಸಿಇಒ ಶರತ್ ಕುಮಾರ್ ಶೆಟ್ಟಿ, ದಂತವೈದ್ಯೆ ಸರಿತಾ ಉಪಾಧ್ಯಾ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ, ಮಂಗಳೂರು ಕಲಾ ಸಾಹಿತಿ ಎಚ್ ಜನಾರ್ದನ ಹಂದೆ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಸ್ವಾಗತಿಸಿದರು. ಪುರಸ್ಕಾರ ಪತ್ರವನ್ನು ಮಂಜುನಾಥ್ ಉಪಾಧ್ಯ ವಾಚಿಸಿದರು. ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನಾಗರಾಜ್ ಉಪಾಧ್ಯ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನ ನಮನ, ಅಂಗನವಾಡಿ ಪುಟಾಣಿಗಳ ನೃತ್ಯ, ಬಡಗುತಿಟ್ಟು ಶೈಲಿಯ ಶ್ರೀದೇವಿ ಯಕ್ಷಕಲಾ ವೃಂದ ಯಕ್ಷಗಾನ ಶ್ರೀ ಕೃಷ್ಣ ತುಲಾಭಾರ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!