Tuesday, April 14, 2026
Tuesday, April 14, 2026

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

Date:

ಕುಕ್ಕೆಹಳ್ಳಿ, ಅ.25: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – ೨೦೨೫ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ನಡೆಯಿತು. ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್ ಶಿಬಿರವನ್ನ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಸಂತೋಷ್ ನೆಲ್ಲಿಕಾರು ದಿಕ್ಸೂಚಿ ಭಾಷಣ ಮಾಡಿ, ಎನ್.ಎಸ್.ಎಸ್. ಇತಿಹಾಸವನ್ನು ತಿಳಿಸಿ ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳ ಬಗ್ಗೆ ಹೇಳಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದಿಲೀಪ್ ಹೆಗ್ಡೆ ಶತಮಾನದ ಇತಿಹಾಸ ಹೊಂದಿರುವ ನಮ್ಮ ಊರಿನ ಶಾಲೆಯಲ್ಲಿ ಶಿಬಿರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಕಾಡೆಮಿಕ್ ಡೀನ್ ಡಾ.ಮಿಥುನ್ ಯು., ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಪಿಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ, ಕುಕ್ಕೆಹಳ್ಳಿಯ ಉದ್ಯಮಿಗಳಾದ ಹರೀಶ್ ಪೂಜಾರಿ ಒಳಮಡಿ, ಪಿ.ಎಂ.ಶ್ರೀ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಕೇಶ್, ಮುಖ್ಯೋಪಾಧ್ಯಾಯರಾದ ಸರಸ್ವತಿ, ಉದ್ಯಮಿಗಳಾದ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ರವಿ ಜಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಧ್ಯಪ್ರವೇಶಿಸಬೇಡಿ: ಹಾರ್ಮುಜ್ ದಿಗ್ಬಂಧನದ ಬಗ್ಗೆ ಅಮೆರಿಕಾಗೆ ಚೀನಾ ಎಚ್ಚರಿಕೆ

ಯು.ಬಿ.ಎನ್.ಡಿ., ಏ.14: ಚೀನಾದ ಹಿರಿಯ ಅಧಿಕಾರಿಯೊಬ್ಬರು ಹಾರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ...

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

ಉಡುಪಿ, ಏ.14: ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ...

ರಥಬೀದಿ ಕಾಲೇಜು: ತುಳು ಐಸಿರೊ-2026

ಮಂಗಳೂರು, ಏ.14: ಇಂದಿನ ಸಾಮಾಜಿಕ ಮಾಧ್ಯಮ, ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ತುಳು...
error: Content is protected !!