ಬೈಂದೂರು, ಅ.27: ಸಾಧನಾ ಸಮಾಜ ಸೇವಾ ವೇದಿಕೆ (ರಿ.) ಮರವಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಹಾಗೂ ಗ್ರಾಮ ಪಂಚಾಯತ್, ಮರವಂತೆ ಇವರ ಸಹಭಾಗಿತ್ವದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಶಿಬಿರವನ್ನು ಸಾಧನಾ ಸಮಾಜ ಸೇವಾ ಸಂಘ (ರಿ.) ಮರವಂತೆ ಇದರ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ಅವರು ನೆರವೇರಿಸಿದರು. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಕೆ. ಗಣೇಶ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಮರವಂತೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನಾಗರಾಜ ಪಟಗಾರ ಶುಭ ಹಾರೈಸಿದರು. ಕೆ.ಎಂ.ಸಿ. ಮಣಿಪಾಲದ ಸ್ತ್ರೀ ರೋಗ ವಿಭಾಗದ ಡಾ. ಅವಿಷಾ ಮತ್ತು ಡಾ. ಅನುಷಾ ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು, ಸಾಧನಾ ವೇದಿಕೆಯ ಸದಸ್ಯರು, ಸ್ಥಳೀಯ ಸ್ತ್ರೀ ಶಕ್ತಿ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮರವಂತೆ ಒಕ್ಕೂಟದ ಪದಾಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಶಿಬಿರದಲ್ಲಿ 175 ಕ್ಕೂ ಹೆಚ್ಚು ಜನರು ಪ್ರಯೋಜನವನ್ನು ಪಡೆದುಕೊಂಡರು.
ಹರೀಶ್ ಗೌಡ ಸ್ವಾಗತಿಸಿ, ದೇವಿದಾಸ್ ಶ್ಯಾನುಭಾಗ್ ವಂದಿಸಿದರು. ಭಾಗ್ಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು.




By
ForthFocus™