ಕಾಪು, ಅ.29: 2002ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಆರ್ ಉಮಾಶಂಕರ್ ಐ.ಎ.ಎಸ್ ಅವರು ಪತ್ನಿಯೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು.
ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಮತ್ತು ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಉಪಸ್ಥಿತರಿದ್ದರು.




By
ForthFocus™