ಉಡುಪಿ ನ.2: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 70 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. ಸಾಧಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಸನ್ಮಾನ ನಡೆಯಿತು
ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವೈಭವದ ಮೆರವಣಿಗೆ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಚಾಲನೆ ನೀಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಉಡುಪಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಸ್ಥಬ್ದಚಿತ್ರಗಳು ಭಾಗವಹಿಸಿದ್ದವು. ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಕೆ.ಆರ್.ಐ.ಡಿ.ಎಲ್ ಪ್ರಥಮ ಸ್ಥಾನ, ನಿರ್ಮಿತಿ ಕೇಂದ್ರ ದ್ವಿತೀಯ ಸ್ಥಾನ ಹಾಗೂ ನಗರಸಭೆ ತೃತೀಯ ಸ್ಥಾನ ಪಡೆದಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂಬಲಪಾಡಿ ಕಿದಿಯೂರು ವಿದ್ಯಾ ಸಮುದ್ರ ಆಂಗ್ಲಮಾಧ್ಯಮ ಶಾಲೆ ಪ್ರಥಮ ಸ್ಥಾನ, ಮಲ್ಪೆ ನಾರಾಯಣ ಗುರು ಪ್ರೌಢಶಾಲೆ ದ್ವಿತೀಯ ಸ್ಥಾನ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆ ತೃತೀಯ ತಮ್ಮದಾಗಿಸಿಕೊಂಡಿದೆ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪಥ ಸಂಚಲನದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಉಡುಪಿಯ ಒಳಕಾಡು ಸರಕಾರಿ ಪ್ರೌಢಶಾಲೆ ಪ್ರಥಮ, ಮಣಿಪಾಲದ ಮಾಧವ ಕೃಪಾ ಪ್ರೌಢಶಾಲೆ ದ್ವಿತೀಯ ಹಾಗೂ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆ (ಹುಡುಗರು) ತೃತೀಯ ಸ್ಥಾನ ಮತ್ತು ಕಾಲೇಜು ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ಆರ್ಮಿ ಪ್ರಥಮ, ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ನೇವಿ ದ್ವಿತೀಯ ಹಾಗೂ ಕುಂಜಿಬೆಟ್ಟು ಮಹಾತ್ಮಾ ಗಾಂಧಿ ಕಾಲೇಜು ತೃತೀಯ ಸ್ಥಾನ ಪಡೆಯಿತು.




By
ForthFocus™