Tuesday, April 21, 2026
Tuesday, April 21, 2026

ಕಟ್ಟಡ ನಿರ್ಮಾಣದ ಗುತ್ತಿಗೆದಾರರಾಗಿ ಸಂಜೀವಿನಿ ಮಹಿಳಾ ಉದ್ಯಮಿದಾರರು; ಒಡಂಬಡಿಕೆ ಹಸ್ತಾಂತರ

ಕಟ್ಟಡ ನಿರ್ಮಾಣದ ಗುತ್ತಿಗೆದಾರರಾಗಿ ಸಂಜೀವಿನಿ ಮಹಿಳಾ ಉದ್ಯಮಿದಾರರು; ಒಡಂಬಡಿಕೆ ಹಸ್ತಾಂತರ

Date:

ಉಡುಪಿ, ನ.2: ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಸಂಜೀವಿನಿ ಮಹಿಳಾ ಗುತ್ತಿಗೆದಾರರಿಗೆ ಒಡಂಬಡಿಕೆ ಹಸ್ತಾಂತರ ಮಾಡಿದರು.
ಜಿಲ್ಲಾ ಪಂಚಾಯತ್ ಉಡುಪಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಮೂಲಕ ಸಂಜೀವಿನಿ ಸ್ವ ಸಹಾಯ ಗುಂಪಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಹಾಗೂ ಗುತ್ತಿಗೆದಾರರಾಗಲು ಆಸಕ್ತಿಯುಳ್ಳ ಮಹಿಳೆಯರನ್ನು ಗುರುತಿಸಲಾಗಿದೆ ಹಾಗೂ ಸರಕಾರಿ ಇಲಾಖೆಯ ಗುತ್ತಿಗೆಗಳನ್ನು ಇವರಿಗೆ ನೀಡುವ ಯೋಜನೆ ರೂಪಿಸಲಾಗಿದೆ. ಇದು ಮಹಿಳಾ ನೇತೃತ್ವದ ಗ್ರಾಮೀಣ ಮಹಿಳೆಯರ ಸಬಲೀಕರಣದ ಹೊಸ ಉಪಕ್ರಮವಾಗಿದೆ. ಈ ಯೋಜನೆಯ ಉದ್ದೇಶ, ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ನಿರ್ಮಾಣ ಕ್ಷೇತ್ರದಲ್ಲಿ ಕೇಂದ್ರ ಬಿಂದುವಾಗಿ ರೂಪಿಸಿ ಇವರಿಗೆ ಹಾಗೂ ಇವರ ಅಧೀನದ ಕೆಲಸಗಾರರಿಗೆ ಶಾಶ್ವತ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವುದಾಗಿದೆ.ಕಲ್ಯಾಣಪುರ ಗ್ರಾಮ ಪಂಚಾಯತ್ ನ ಬೆನಕ ಸಂಜೀವಿನಿ ಸ್ವ ಸಹಾಯ ಗುಂಪಿನ ಶಾಲಿನಿ ಸುರೇಶ್ ಹಾಗೂ ಕೊರಗಜ್ಜ ಸಂಜೀವಿನಿ ಸ್ವ ಸಹಾಯ ಗುಂಪಿನ ಸ್ಮಿತಾ ಇವರು ಈಗಾಗಲೇ ಸಂಬಂಧ ದಾಖಲೆಗಳನ್ನು ಪಡೆದಿದ್ದಾರೆ.

ಸರಕಾರಿ ಇಲಾಖೆಗಳಲ್ಲಿನ ಗುತ್ತಿಗೆ ಕೆಲಸಗಳನ್ನು ಈ ಮಹಿಳೆಯರಿಗೆ ನೀಡಲಾಗುವುದು.ಒಂದು ಕಾಲದಲ್ಲಿ ನಿರ್ಮಾಣ ಕ್ಷೇತ್ರ ಪುರುಷ ಪ್ರಧಾನವಾಗಿದ್ದು ಜಿಲ್ಲೆಯ ಗ್ರಾಮೀಣ ಪ್ರದೇಶದ ಸಂಜೀವಿನಿ ಮಹಿಳೆಯರು ಹೊಸ ಉದ್ಯಮಿದಾರರಾಗಲು ಸಿದ್ದರಾಗಿದ್ದಾರೆ.

ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಕಿರಣ ಕುಮಾರ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ್ ಸರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ‌ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!