Sunday, September 27, 2026
Sunday, September 27, 2026

ಬೃಹತ್ ಗೀತೋತ್ಸವದ ಕಾರ್ಯಾಲಯ ಉದ್ಘಾಟನೆ

ಬೃಹತ್ ಗೀತೋತ್ಸವದ ಕಾರ್ಯಾಲಯ ಉದ್ಘಾಟನೆ

Date:

ಉಡುಪಿ, ನ.2: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದ ಪರಮಪೂಜ್ಯ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಅಪೂರ್ವ ಜಾಗತಿಕ ಯೋಜನೆಯಾದ ‘ಕೋಟಿ ಗೀತಾ ಲೇಖನ ಯಜ್ಞ’ ಮತ್ತು ಗೀತಾ ಜಯಂತಿಗಳ ಅಂಗವಾಗಿ ಉಡುಪಿ ಶ್ರೀಕೃಷ್ಣಮಠದಲ್ಲಿ ‘ಬೃಹತ್ ಗೀತೋತ್ಸವ’ ವೆಂಬ ಹೆಸರಿನ , ಒಂದು ತಿಂಗಳ ಪರ್ಯಂತ ನಡೆಯುವ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರ ಅಂಗವಾಗಿ ರಾಜಾಂಗಣದ ಬಳಿ ವಿವಿಧ ಕಾರ್ಯಕರ್ತರ ವಿವಿಧ ಸಂವಹನಗಳಿಗಾಗಿ ಗೀತೋತ್ಸವ ಕಾರ್ಯಾಲಯವನ್ನು ತೆರಲಾಯಿತು.

ದೀಪ ಬೆಳಗುವ ಮೂಲಕ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರು ಕಾರ್ಯಾಲಯವನ್ನು ಉದ್ಘಾಟಿಸಿದರು. ತದನಂತರ ರಾಜಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅನುಗ್ರಹಿಸಿದ ಪರ್ಯಾಯ ಶ್ರೀಪಾದರು ತಮ್ಮ ವಿಶ್ವ ಗೀತಾ ಪರ್ಯಾಯದಲ್ಲಿ ಭಗವದ್ಗೀತೆಯ ತತ್ವವನ್ನೇ ಜೀವನದಲ್ಲಿ ಅಳವಡಿಸಿಕೊಂಡಿರುವ ವಿಶ್ವದೆಲ್ಲೆಡೆ ಸಂಚರಿಸಿದಾಗ ಭಗವದ್ಗೀತೆಯನ್ನು ಉಡುಗೊರೆಯಾಗಿ ವಿಶ್ವ ನಾಯಕರಿಗೆ ನೀಡುವ ಪರಿಪಾಠವನ್ನು ರೂಢಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವಂಬರ್ ೨೮ ರಂದು ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನಕ್ಕೆ ಆಗಮಿಸುತ್ತಿರುವುದು ನಮಗೆ ತುಂಬ ಸಂತಸವನ್ನು ತಂದಿದೆ. ಇದೆಲ್ಲವೂ ಗೀತಾಚಾರ್ಯ ಶ್ರೀಕೃಷ್ಣನ ಸಂಕಲ್ಪವಾಗಿದೆ. ನೀವೆಲ್ಲರೂ ಈ ಉತ್ಸವದ ಯಶಸ್ಸಿಗೆ ಸಹಕರಿಸಬೇಕು, ತನ್ಮೂಲಕ ಶ್ರೀಕೃಷ್ಣ ಮುಖ್ಯಪ್ರಾಣರ ಪರಮಾನುಗ್ರಹಕ್ಕೆ ಪಾತ್ರರಾಗಬೇಕೆಂದು ಅನುಗ್ರಹಿಸಿದರು.

ವಿಜೃಂಭಣೆಯಿಂದ ಶಾರದೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಸುಪ್ರಸಾದ ಶೆಟ್ಟಿಯವರ ಸಂಚಾಲಕತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ದಿವಾನರಾದ ನಾಗರಾಜಾಚಾರ್ಯ ಮಾತನಾಡಿ ವಿವಿಧ ಸಮಿತಿಗಳನ್ನು ಉಲ್ಲೇಖಿಸಿ ಎಲ್ಲ ಸಮುದಾಯದ ಆಸಕ್ತ ಜನರು ಪಾಲ್ಗೊಳ್ಳುವ ಮೂಲಕ ಬೃಹತ್ ಮಾಸೋತ್ಸವ ಕಾರ್ಯಕ್ರಮವನ್ನು ಯಶಸ್ವಿಗಿಳಿಸುವಂತೆ ವಿನಂತಿಸಿದರು.

ಸಂಚಾಲಕರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ ಹಿಂದೂ ಸಮಾಜೋತ್ಸವದ ಮಾದರಿಯಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ತಾಗಿ ಯಶಸ್ವಿಯಾಗಿ ಮಾಡಲು ವಿನಂತಿಸಿ ಎಲ್ಲರ ಸಹಕಾರವನ್ನು ಕೋರಿದರು.

ಕಾರ್ಯದರ್ಶಿ ಪ್ರಸನ್ನಾಚಾರ್ಯ ಪ್ರಧಾನಿಯವರ ಭೇಟಿಯ ವಿವರವನ್ನು ನೀಡಿ ಸಾರ್ವಜನಿಕರು ಮುಕ್ತವಾಗಿ ಸಭೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು. ಗೀತೋತ್ಸವದ ಮಾಹಿತಿಯನ್ನು ಪ್ರಮೋದ್ ಸಾಗರ್ ರವರೂತ್ ನೀಡಿದರು. ರಮೇಶ ಭಟ್ ಸ್ವಾಗತಿಸಿ, ವಿಕ್ರಂ ಕುಂಟಾರ ವಂದಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಾರದೋತ್ಸವ ಸಮಿತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು, ಹಿಂದೂ ಜಾಗರಣ ವೇದಿಕೆ, ದೈವಜ್ಞ ಬ್ರಾಹ್ಮಣರ ಸಂಘ, ರಾಮ ಕ್ಷತ್ರಿಯ ಸಂಘ, ಮನೋಳಿಗುಜ್ಜಿ ಗಣೇಶೋತ್ಸವ ಸಮಿತಿ, ಗಾಣಿಗ ಸಮಾಜ, ಉಡುಪಿ ತಾಲೂಕು ಮಾತೃ ಮಂಡಳಿ, ತಾಲೂಕು ಬ್ರಾಹ್ಮಣರ ಸಂಘ, ಅಯ್ಯಪ್ಪ ಸೇವಾ ಮಹಿಳಾ ಮಂಡಳಿ, ಫಣಿಯಾಡಿ ಯುವಕರ ಸಂಘ, ಕಡಿಯಾಳಿ ಗೆಳೆಯರ ಬಳಗ, ನವಚೇತನ ಯುವಕ ಮಂಡಲ ಮೊದಲಾದ ಸಂಘ ಯುವ ಬ್ರಾಹ್ಮಣ ಪರಿಷತ್,ತು ಶಿ ಮಾ ಮ ಮೊದಲಾದ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!