Saturday, February 7, 2026
Saturday, February 7, 2026

ನಗರಸಭೆಯ ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ನಗರಸಭೆಯ ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ನ.4: ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತವಾದ ಎಸ್.ಎಫ್.ಸಿ ಅನುದಾನದ ಶೇ. 5 ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತ್ರಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಬಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ ಮತ್ತು ಇತರ ವೃತ್ತಿಪರ ತರಗತಿ ಡಿಪ್ಲೋಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ಲಭ್ಯವಿದ್ದು, ಆಸಕ್ತರು ನವೆಂಬರ್ 10 ರ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!