Thursday, July 30, 2026
Thursday, July 30, 2026

5 ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಉನ್ನತಿ ಹಂದಟ್ಟು ಆಯ್ಕೆ

5 ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಉನ್ನತಿ ಹಂದಟ್ಟು ಆಯ್ಕೆ

Date:

ಕೋಟ, ನ.10: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ಕೈಂಡ್ ಹಾರ್ಟ್ಸ್ ಬಾಳ್ಕುದು, ಶ್ರೀ ವೇಣುಗೋಪಾಲಕೃಷ್ಣ ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಉಸಿರು ಕೋಟ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಇದೇ ನವೆಂಬರ್ ತಿಂಗಳ 23 ರಂದು ನಡೆಯುವ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಗುಂಡ್ಮಿ ಉಮೇಶ ಪೂಜಾರಿ ಹಾಗೂ ವಸಂತಿ ಪೂಜಾರಿಯವರ ಪುತ್ರಿ, ವಿವೇಕ ಬಾಲಕಿಯರ ಪ್ರೌಢಶಾಲೆಯ 10ನೆ ತರಗತಿ ವಿದ್ಯಾರ್ಥಿನಿ ಬಹುಮುಖ ಪ್ರತಿಭೆಯ ಉನ್ನತಿ ಹಂದಟ್ಟು ಆಯ್ಕೆಯಾಗಿರುತ್ತಾರೆ. ಈಕೆ ಯಕ್ಷಗಾನ, ನಾಟಕ, ಹಾಡು ಮೊದಲಾದ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುತ್ತಾಳೆ.

ಅಂದು ಮಕ್ಕಳ ಕವಿಗೋಷ್ಠಿ ಮಕ್ಕಳ ಸಾಂಸ್ಕೃತಿಕ ಉತ್ಸವ ಮತ್ತು ಕಾರಂತ ಬಾಲಪುರಸ್ಕಾರ ಪ್ರದಾನ ಮಾಡುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಆನಂದ ಸಿ ಕುಂದರ್, ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಕೈಂಡ್ ಹಾರ್ಟ್ಸ್ನ ಸ್ಟೀಫನ್ ಲೂಯಿಸ್, ಶ್ರೀ ವೇಣುಗೋಪಾಲಕೃಷ್ಣ ಎಜ್ಯುಕೇಶನಲ್ ಸೊಸೈಟಿಯ ಗಣೇಶ ಜಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!