Thursday, July 30, 2026
Thursday, July 30, 2026

ಆನೆಗುಡ್ಡೆ: ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಒಂದು ದಿನದ ವಿಶೇಷ ಶಿಬಿರ

ಆನೆಗುಡ್ಡೆ: ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಒಂದು ದಿನದ ವಿಶೇಷ ಶಿಬಿರ

Date:

ಕುಂದಾಪುರ, ನ.10: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ (1 ಮತ್ತು 2) ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಶಿ ಇಲ್ಲಿ ನಡೆಯಿತು. ಶ್ರೀ ವಿನಾಯಕ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ರಮಣ ಉಪಾಧ್ಯಾಯ ಶಿಬಿರಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಪುರೋಹಿತ ವೃಂದದವರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್, ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ, ಪ್ರವೀಣ್ ಮೊಗವೀರ, ಹರೀಶ್ ಬಿ., ಸುಧೀರ್ ಕುಮಾರ್, ಬೋಧಕೇತರ ಸಿಬ್ಬಂದಿಗಳಾದ ರಕ್ಷಿತ್, ಶರತ್ ಕೊಠಾರಿ, ನಿತೇಶ್, ದೇವಸ್ಥಾನದ ಮ್ಯಾನೇಜರ್ ನಿತೇಶ್ ಕಾರಂತ್, ಗಣೇಶ್ ಅಂಪಾರು ಮತ್ತು ಪ್ರಮೋದ್ ಉಪಾಧ್ಯಾಯ ಆನೆಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು. ಆನೆಗುಡ್ಡೆ ದೇವಸ್ಥಾನ ಪರಿಸರವನ್ನು ಸ್ವಚ್ಛಗೊಳಿಸುವ ಈ ಶಿಬಿರದಲ್ಲಿ ಕಾಲೇಜಿನ 70 ಸ್ವಯಂಸೇವಕರು ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!