Friday, November 20, 2026
Friday, November 20, 2026

ಉಡುಪಿಗೆ ಪ್ರಧಾನಿ ಮೋದಿ; ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

ಉಡುಪಿಗೆ ಪ್ರಧಾನಿ ಮೋದಿ; ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

Date:

ಉಡುಪಿ, ನ.10: ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆದಿಉಡುಪಿ ಹೆಲಿಪ್ಯಾಡ್ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದಿ ಉಡುಪಿಯಲ್ಲಿ ಪ್ರಸ್ತುತ ಇರುವ 3 ಹೆಲಿಪ್ಯಾಡ್ ಗಳನ್ನು ನವೀಕರಿಸುವ ಜೊತೆಗೆ ಹೆಚ್ಚುವರಿಯಾಗಿ ಒಂದು ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಈಗಾಗಲೇ ಜಿಲ್ಲಾಡಳಿತ ನಿರ್ಧರಿಸಿದ್ದು, ತಕ್ಷಣ ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ಮಾಣ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಉಡುಪಿ ನಗರಸಭೆ ವತಿಯಿಂದ ಹೆಲಿಪ್ಯಾಡ್ ಪ್ರದೇಶದಲ್ಲಿ ಹುಲ್ಲುಗಳನ್ನು ತೆರವುಗೊಳಿಸಿ,ಸ್ವಚ್ಚತೆ ಕಾರ್ಯಗಳು ನಡೆಯುತ್ತಿದೆ., ಹೆಲಿಪ್ಯಾಡ್ ಸಂಪರ್ಕಿಸುವ ರಸ್ತೆಗಳ ರಿಪೇರಿಗೆ ಕ್ರಮ ವಹಿಸಲಾಗಿದ್ದು, ಹೆಲಿಪ್ಯಾಡ್ ಪ್ರದೇಶಕ್ಕೆ ಶೀಘ್ರದಲ್ಲಿ ಸುಸಜ್ಜಿತ ಗೇಟ್ ಅಳವಡಿಕೆ ಹಾಗೂ ಆವರಣ ಗೋಡೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಆದಿ ಉಡುಪಿ ಕರಾವಳಿ ಜಂಕ್ಷನ್ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದಲ್ಲಿ ಸುಗಮ ಸಂಚಾರಕ್ಕೆ ವಿಶೇಷ ಆದ್ಯತೆ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಇಂಜಿನಿಯರ್ ರವರಿಗೆ ಹೇಳಿದರು.

ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ಸುಂದರ ಕಲ್ಮಾಡಿ, ಶ್ರೀಶ ಭಟ್, ನಗರಸಭೆ ಮಾಜಿ ಅಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರಮುಖರಾದ ಹರೀಶ್ ರಾಮ್, ದಿನೇಶ್ ಅಮೀನ್, ಅಕ್ಷಿತ್ ಶೆಟ್ಟಿ ಹೆರ್ಗ, ಲೋಕೋಪಯೋಗಿ ಇಲಾಖೆಯ ಅಭಿಯಂತರ ಲಾಯ್ಡ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಹಾಯಕ ಇಂಜಿನಿಯರ್ ಮಂಜುನಾಥ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!